Tel: 7676775624 | Mail: info@yellowandred.in

Language: EN KAN

    Follow us :


ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

Posted date: 05 Sep, 2021

Powered by:     Yellow and Red

ಅಪ್ಪನಭುಜ ಎಲ್ಲಾ ಸಿಂಹಾಸನಗಳನ್ನು ಮೀರಿಸಿದ್ದು. ಮಾಯಣ್ಣ

ಅಪ್ಪನ ಭುಜವು ಎಲ್ಲಾ ಮಕ್ಕಳಿಗೂ ಅತಿ ಎತ್ತರದ ಸಿಂಹಾಸನ. ಅದನ್ನೇರದ ಮಕ್ಕಳಿಲ್ಲ. ಯಾವುದೇ ಜಾತ್ರೆ, ಸರ್ಕಸ್, ದೇವರನ್ನು ನೋಡಬೇಕೆಂದರೆ ನಮಗೆ ಅಪ್ಪನ ಭುಜವೇ ಸಿಂಹಾಸನವಾಗಿತ್ತು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಆಕಾಂಕ್ಷಿತ ಅಭ್ಯರ್ಥಿ ಮಾಯಣ್ಣ ತಿಳಿಸಿದರು. ಅವರು ತಾಲ್ಲೂಕಿನ ಪುಟ್ಟಪ್ಪನದೊಡ್ಡಿ ಗ್ರಾಮದ ಸರ್ಕಾರಿ ಶಾಲೆಯ ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ಸಂದೇಶ್ ಕಂಬಾರ್ ರವರು ರಚಿಸಿರುವ ಅಪ್ಪನಭುಜ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದರು.


ಕವಿ ಸಂದೇಶ್ ಕುಂಬಾರ್ ಅವರ ಮತ್ತೊಂದು ಕೃತಿ ಜನರ ಕೂಗು ಕೃತಿಯನ್ನು ಕನ್ನಡ ಜಾನಪದ ಪರಿಷತ್ತಿನ ಅಧ್ಯಕ್ಷರಾದ ಡಾ.ಎಸ್.ಬಾಲಾಜಿಯವರು ಲೋಕಾರ್ಪಣೆ ಮಾಡಿದರು. ಕಾರ್ಯಕ್ರಮ ಉದ್ಘಾಟನೆ ಮಾಡಿದ ಮಾಯಣ್ಣ ಮಾತನಾಡಿ ಅಪ್ಪನಭುಜ ಎಲ್ಲಾ ಸಿಂಹಾಸನವನ್ನು ಮೀರಿಸಿದ್ದು ಎಂದರು. ಇತ್ತೀಚಿನ ದಿನಗಳಲ್ಲಿ ಕನ್ನಡ ಸಾಹಿತ್ಯವನ್ನು ಉಳಿಸಿಬೆಳೆಸುವ ಕೆಲಸ ಆಗಬೇಕು. ಮಕ್ಕಳು ಮೊಬೈಲ್‌ಗೆ ದಾಸರಾಗುತ್ತಿದ್ದಾರೆ. ಪೋಷಕರು ಧಾರಾವಾಹಿಗಳನ್ನು ನೋಡುವುದರಲ್ಲಿ ಮುಳುಗಿ ಹೋಗುತ್ತಿದ್ದಾರೆ ಎಂದರು.

ಮಕ್ಕಳನ್ನು ಒಳ್ಳೆಯ ಪ್ರಜೆಗಳನ್ನಾಗಿ ಮಾಡಿ ಎಂದು ಪುಟ್ಟಪ್ಪನದೊಡ್ಡಿ ಗ್ರಾಮಸ್ಥರಲ್ಲಿ ಮನವಿ ಮಾಡಿದರು.


ಇನ್ನೂ ಜನರ ಕೂಗು ಪುಸ್ತಕವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾದ ಡಾ. ಎಸ್.ಬಾಲಾಜಿಯವರು ಮಾತನಾಡಿ ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಜಾನಪದ ಕಲೆಗಳು ನಶಿಸಿ ಹೋಗುತ್ತಿವೆ. ಜಾನಪದ ಕಲೆಗಳನ್ನು ಪೋಷಿಸುವ ಕೆಲಸವಾಗಬೇಕು, ಸರ್ಕಾರ ಜಾನಪದ ಕಲಾವಿದರಿಗೆ ಪ್ರೋತ್ಸಾಹ ಧನವನ್ನು ನೀಡುವ ಮೂಲಕ ಜಾನಪದವನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದರು. ಕಾರ್ಯಕ್ರಮದಲ್ಲಿ ಲೇಖಕ, ಕವಿ ಸಂದೇಶ್ ಕುಂಬಾರ್, ಸಾಹಿತಿಗಳಾದ ಮತ್ತೀಕೆರೆ ಚಲುವರಾಜು, ಮಂಜೇಶ್ ಬಾಬು, ಮುದಗೆರೆ ಗ್ರಾಪಂ. ಅಧ್ಯಕ್ಷೆ ಬಿಂದು ಸುರೇಶ್, ಕುವೆಂಪು ಕರ್ನಾಟಕ ಜನಪರ ವೇದಿಕೆಯ ಅಧ್ಯಕ್ಷರಾದ ಸುನೀಲ್ ಕುಮಾರ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಕೃತಿಗಳ ಲೋಕಾರ್ಪಣೆ ವೇಳೆ ಗೀತಗಾಯನ ಹಾಗೂ ಕವಿಗೋಷ್ಟಿ ಕಾರ್ಯಕ್ರಮ, ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.ಚನ್ನಪಟ್ಟಣ ತಾಲೂಕಿನ ದಂಡಾಧಿಕಾರಿಗಳಿಗೆ ಪುಟ್ಟಪ್ಪನದೊಡ್ಡಿ ಗ್ರಾಮದಲ್ಲಿ ಸನ್ಮಾನಿಸಲಾಯಿತು. ಪುಟ್ಟಪ್ಪನದೊಡ್ಡಿ ಸಾಹಿತಿ ಸಂದೇಶ್ ಕುಂಬಾರ್ ಅವರ ಅಪ್ಪನ ಭುಜ ಹಾಗೂ ಜನರ ಕೂಗು ಎರಡು ಕೃತಿಗಳ ಲೋಕಾರ್ಪಣೆ ವೇಳೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು. ಇದೇ ವೇಳೆ ಮಾತನಾಡಿದ ತಾಲೂಕು ದಂಡಾಧಿಕಾರಿ ನಾಗೇಶ್ ಅವರು ಗ್ರಾಮೀಣ ಭಾಗದಲ್ಲಿ ಪುಸ್ತಕ ಬಿಡುಗಡೆ ಮಾಡುವುದು ಉತ್ತಮವಾದ ಕೆಲಸ, ಚನ್ನಪಟ್ಟಣ ತಾಲೂಕಿನ ಸಾಹಿತಿಗಳಾದ ಸಂದೇಶ್ ಅವರು ಮತ್ತಷ್ಟು ಕೃತಿಗಳನ್ನು ರಚಿಸಲಿ ಎಂದು ಶುಭಾರೈಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑