Tel: 7676775624 | Mail: info@yellowandred.in

Language: EN KAN

    Follow us :


ವಿದ್ಯುತ್‌ಚಾಲಿತ ಹಾಲು ಕರೆಯುವ ಯಂತ್ರಕ್ಕೆ ಅರ್ಜಿ ಆಹ್ವಾನ

Posted date: 07 Sep, 2021

Powered by:     Yellow and Red

ವಿದ್ಯುತ್‌ಚಾಲಿತ ಹಾಲು ಕರೆಯುವ ಯಂತ್ರಕ್ಕೆ ಅರ್ಜಿ ಆಹ್ವಾನ

ರಾಮನಗರ, ಸೆಪ್ಟಂಬರ್,೦೭: ರಾಮನಗರ ಜಿಲ್ಲಾ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2021-22ನೇ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಫಲಾನುಭವಿಗಳಿಗೆ ವಿದ್ಯುತ್ ಚಾಲಿತ ಹಾಲು ಕರೆಯುವ ಯಂತ್ರ ಮತ್ತು ಹಸುಗಳಿಗೆ ರಬ್ಬರ್ ನೆಲಹಾಸು ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನಾಂಕವಾಗಿದೆ.


ಅರ್ಜಿದಾರರು ಹೈನುಗಾರಿಕೆಯಲ್ಲಿ ಅನುಭವವುಳ್ಳವರಾಗಿರಬೇಕು, ಕನಿಷ್ಟ 2 ಹಾಲು ಕರೆಯುವ ಮಿಶ್ರತಳಿ ರಾಸುಗಳನ್ನು ಹೊಂದಿದ್ದು, ರಾಸುಗಳಿಗೆ ಕಿವಿಯೋಲೆ ಅಳವಡಿಸಿರಬೇಕು ಮತ್ತು ಇದಕ್ಕೆ ಸ್ಥಳೀಯ ಪಶುವೈದ್ಯರಿಂದ ದೃಢೀಕರಣ ಪತ್ರ ಪಡೆದಿರಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ದವರಿಗೆ ನೀಡುವ ಜಾತಿ ಪ್ರಮಾಣ ಪತ್ರವನ್ನು ಹೊಂದಿರಬೇಕು ಹಾಗೂ ಬಿ.ಪಿ.ಎಲ್. ಕಾರ್ಡ್ ಹೊಂದಿರಬೇಕು.

 ಆಸಕ್ತರು ನಿಗದಿತ ನಮೂನೆಯ ಅರ್ಜಿಯನ್ನು ತಾಲ್ಲೂಕಿನ ವ್ಯಾಪ್ತಿಗೆ ಒಳಪಡುವ ಪಶು ಆಸ್ಪತ್ರೆ / ಪಶು ಚಿಕಿತ್ಸಾಲಯ ಮುಖ್ಯಪಶುವೈದ್ಯಾಧಿಕಾರಿಗಳು (ಆಡಳಿತ) / ಪಶುವೈದ್ಯಾಧಿಕಾರಿಗಳು ರವರಿಂದ ಅರ್ಜಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಸೇವಾ ವ್ಯಾಪ್ತಿಗೊಳಪಡುವ ಪಶುವೈದ್ಯ ಸಂಸ್ಥೆಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ರಾಮನಗರ ಪಶು ಆಸ್ಪತ್ರೆ ಮುಖ್ಯಪಶುವೈದ್ಯಾಧಿಕಾರಿಗಳು (ಆಡಳಿತ) ದೂರವಾಣಿ ಸಂಖ್ಯೆ-9845459869, ಚನ್ನಪಟ್ಟಣ ಪಶು ಆಸ್ಪತ್ರೆ ಮುಖ್ಯಪಶುವೈದ್ಯಾಧಿಕಾರಿಗಳು (ಆಡಳಿತ) ದೂರವಾಣಿ ಸಂಖ್ಯೆ-9844133098, ಮಾಗಡಿ ಪಶು ಆಸ್ಪತ್ರೆ ಮುಖ್ಯಪಶುವೈದ್ಯಾಧಿಕಾರಿಗಳು (ಆಡಳಿತ) ದೂರವಾಣಿ ಸಂಖ್ಯೆ-9448864893 ಹಾಗೂ ಕನಕಪುರ ಪಶು ಆಸ್ಪತ್ರೆ ಮುಖ್ಯಪಶುವೈದ್ಯಾಧಿಕಾರಿಗಳು (ಆಡಳಿತ) ದೂರವಾಣಿ ಸಂಖ್ಯೆ- 9449525286 ಅನ್ನು ಸಂಪರ್ಕಿಸಬಹುದು ಎಂದು ರಾಮನಗರ ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೋ ರಾ ಶ್ರೀನಿವಾಸ...
ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑