Tel: 7676775624 | Mail: info@yellowandred.in

Language: EN KAN

    Follow us :


36 ನೇ ಕಾರ್ಯನಿರತ ಪತ್ರಕರ್ತರ ಸಮ್ಮೇಳನ: ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

Posted date: 16 Sep, 2021

Powered by:     Yellow and Red

36 ನೇ ಕಾರ್ಯನಿರತ ಪತ್ರಕರ್ತರ ಸಮ್ಮೇಳನ: ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಅಕ್ಟೋಬರ್ ತಿಂಗಳು ಕಲಬುರಗಿಯಲ್ಲಿ ನಡೆಸಲು ಉದ್ದೇಶಿಸಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ 36 ನೇ ರಾಜ್ಯ ಸಮ್ಮೇಳನದ ಉದ್ಘಾಟನೆ ನೆರವೇರಿಸಲು ಆಗಮಿಸುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಇಂದು ಮನವಿ ಮಾಡಲಾಯಿತು.


ವಿಧಾನಸೌಧದಲ್ಲಿಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ನೇತೃತ್ವ ಹಾಗೂ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ರವರ ಉಸ್ತುವಾರಿಯಲ್ಲಿ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿ ಸಮ್ಮೇಳನ ಉದ್ಘಾಟನೆ ದಿನಾಂಕ ನಿಗದಿ ಜತೆಗೆ ಸಮ್ಮೇಳನ ಉದ್ಘಾಟನೆ ಆಗಮಿಸುವಂತೆ ಆಹ್ವಾನಿಸಲಾಯಿತು.


ಮನವಿ ಆಲಿಸಿದ ಮುಖ್ಯಮಂತ್ರಿ ಗಳು ಕಲಬುರಗಿಯಲ್ಲಿನ ಪತ್ರಕರ್ತರ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರವಿದೆ. ಇದೇ ಸೆ. 17 ನೇ ತಾರೀಖಿನಂದು ಕಲಬುರಗಿ ಗೆ ಆಗಮಿಸುತ್ತಿದ್ದು ಅಲ್ಲಿ ಸಮ್ಮೇಳನ ಕುರಿತಾಗಿ ಚರ್ಚಿಸೋಣ ಎಂದು ತಿಳಿಸಿದರು.


ಇದೇ ವೇಳೆ ಸಮ್ಮೇಳನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಅವರು ಭರವಸೆ ನೀಡಿದರು.


ಆಹ್ವಾನ ಸಂದರ್ಭದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಭವಾನಿಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ದೇವಿಂದ್ರಪ್ಪ ಅವಂಟಿ, ರಾಜ್ಯ ಸಮಿತಿ ಸದಸ್ಯರಾದ ಹಣಮಂತರಾವ ಭೈರಾಮಡಗಿ, ದೇವಿಂದ್ರಪ್ಪ ಕಪನೂರ, ಖಜಾಂಚಿ ರಾಜು ದೇಶಮುಖ ಸೇರಿದಂತೆ ಮುಂತಾದವರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

??????????????

  • ????? ???????? ??????????? ???? ??????????.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑