ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ ನೀಡಿದ ತಹಶಿಲ್ದಾರ್ ನಾಗೇಶ್

ರಾಮನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಚನ್ನಪಟ್ಟಣ ತಾಲ್ಲೂಕಿನ ಕನ್ನಮಂಗಲ ಗ್ರಾಮ ಟ್ರೈಕ್ವೆಟ್ರಾ ಅಡ್ವೆಂಚರ್ ಕ್ಯಾಂಪ್ ನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚನ್ನಪಟ್ಟಣ ತಾಲ್ಲೂಕಿನ ತಹಶೀಲ್ದಾರ್ ನಾಗೇಶ್ ಅವರು ಚಾಲನೆ ನೀಡಿದರು.
ರಾಮನಗರದಲ್ಲಿ ಬಹಳಷ್ಟು ಹಸಿರು ತುಂಬಿದ ಪ್ರವಾಸಿ ಸ್ಥಳಗಳಿವೆ. ಸುತ್ತಲೂ ರಕ್ಷಣೆ ನೀಡುವ ಬಂಡೆಗಳಿವೆ. ಬೆಂಗಳೂರಿಗೆ ಹತ್ತಿರವಿರುವುದರಿಂದ ಜಿಲ್ಲೆ ಅಭಿವೃದ್ಧಿಯಾಗುತ್ತದೆ ಹಾಗೂ ಪ್ರವಾಸಿಗರನ್ನು ಆಕರ್ಷಿಸುತ್ತದೆ. ಪ್ರವಾಸೋದ್ಯಮ ಜನರಿಗೆ ಉದ್ಯೋಗ ಹಾಗೂ ಮನರಂಜನೆ ನೀಡುತ್ತದೆ. ಪ್ರವಾಸಿಗರು ಬಂದರೆ ವ್ಯಾಪಾರ ವಹಿವಾಟು ನಡೆಯುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಹರೀಶ್ ಅವರು ತಿಳಿಸಿದರು.
ವೀರಗಾಸೆ ಹಾಗೂ ಡೊಳ್ಳು ಕುಣಿತದ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗಣ್ಯರನ್ನು ಸ್ವಾಗತಿಸಲಾಯಿತು.
ಕಾರ್ಯಕ್ರಮದಲ್ಲಿ ರಾಂಪುರ ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿಗಳಾದ ಕೃಷ್ಣ ಕುಮಾರ್, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಪ್ರವಾಸಿ ಮಿತ್ರರು ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು