Tel: 7676775624 | Mail: info@yellowandred.in

Language: EN KAN

    Follow us :


ಹಾನಗಲ್-ಸಿಂಧಗಿ ಉಪ ಚುನಾವಣೆ ನಮ್ಮ ಪಕ್ಷಕ್ಕೆ ಸಿದ್ಧತಾ ಪರೀಕ್ಷೆ ಕುಮಾರಸ್ವಾಮಿ ಘೋಷಣೆ

Posted date: 28 Sep, 2021

Powered by:     Yellow and Red

ಹಾನಗಲ್-ಸಿಂಧಗಿ ಉಪ ಚುನಾವಣೆ ನಮ್ಮ ಪಕ್ಷಕ್ಕೆ ಸಿದ್ಧತಾ ಪರೀಕ್ಷೆ ಕುಮಾರಸ್ವಾಮಿ ಘೋಷಣೆ

ರಾಮನಗರ: ಅಕ್ಟೋಬರ್ 30 ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಕಟಿಸಿದರು.


ಎರಡೂ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಕೂಡಲೇ ಬಿಡದಿಯ ತಮ್ಮ ತೋಟದಲ್ಲಿ ಮಾಧ್ಯಮಗಳಿಗೆ ಮಂಗಳವಾರ ಅವರು ಪ್ರತಿಕ್ರಿಯೆ ನೀಡಿದರು.

ರಾಜ್ಯದಲ್ಲಿ ಎರಡು ಉಪ ಚುನಾವಣೆಗಳಿಗೆ ದಿನಾಂಕ ಪ್ರಕಟವಾಗಿದೆ.ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ ಎಂದರು. 


ಸಿಂಧಗಿ ಹಾಗೂ ಹಾನಗಲ್ ನಲ್ಲಿ ಶಾಸಕರು ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದು ಅವರು ತಿಳಿಸಿದರು.

ನಿನ್ನೆಯಿಂದ ವಿನೂತನ ಕಾರ್ಯಗಾರ ಮಾಡುತ್ತಿದ್ದೇವೆ. ಈ ಸಮಯದಲ್ಲಿಯೇ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದಾರೆ. ಇದು ನಮ್ಮ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತಾ ಪರೀಕ್ಷೆಯಂತೆ ಬಂದಿದೆ. ಈಗಾಗಲೇ ನಯಾಜ್ ಅವರನ್ನು ಹಾನಗಲ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ. ಅವರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.


ಸಿಂಧಗಿ ಕ್ಷೇತ್ರದಲ್ಲಿ ಐವರು ಟಿಕೆಟ್ ಕೇಳುತ್ತಿದ್ದಾರೆ. ಈಗಾಗಲೇ ಚರ್ಚೆ ಕೂಡ ಮಾಡುತ್ತಿದ್ದೇವೆ. ಎರಡೂ ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಹಾಗೂ ಚುನಾವಣೆಗೆ ಸಾಮೂಹಿಕ ನಾಯಕತ್ವದಲ್ಲಿ ಹೋಗುತ್ತೇವೆ. ಇಂದಿನ ಸಭೆಯಲ್ಲಿ ಈ  ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.


ಹಾನಗಲ್ ಕ್ಷೇತ್ರದಲ್ಲಿ ನಯಾಜ್ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಈ ಚುನಾವಣೆ ಗೆಲ್ಲಲು ಈ ಕಾರ್ಯಗಾರದಲ್ಲಿ ತರಬೇತಿ ನೀಡಲಾಗುತ್ತದೆ ಎಂದು ಅವರು ಹೇಳಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑