Tel: 7676775624 | Mail: info@yellowandred.in

Language: EN KAN

    Follow us :


ಉತ್ತರ ಪ್ರದೇಶದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ಕೊಂದ ಸಚಿವರ ಪುತ್ರ. ತಹಶಿಲ್ದಾರ್ ಗೆ ಮನವಿ ಸಲ್ಲಿಸಿದ ಸಂಘಟನಾಕಾರರು

Posted date: 05 Oct, 2021

Powered by:     Yellow and Red

ಉತ್ತರ ಪ್ರದೇಶದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ಕೊಂದ ಸಚಿವರ ಪುತ್ರ. ತಹಶಿಲ್ದಾರ್ ಗೆ ಮನವಿ ಸಲ್ಲಿಸಿದ ಸಂಘಟನಾಕಾರರು

ಚನ್ನಪಟ್ಟಣ: ಅ/04. ದೇಶಾದ್ಯಂತ ರೈತ ವಿರೋಧಿ ಕಾಯ್ದೆಗಳ ವಿರುದ್ದ ರೈತ ಚಳವಳಿಗಳು ತೀವ್ರತೆ ಪಡೆಯುತ್ತಿರುವುದನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಮುಗ್ಧ ರೈತರ ವಿರುದ್ದ ಯುದ್ದ ಸಾರಿ, ಚಳವಳಿ ನಿರತ ರೈತರನ್ನು ಬಲಿ ಪಡೆಯುತ್ತಿದೆ. ಇದನ್ನು ತಡೆದು ಪ್ರಜಾಪ್ರಭುತ್ವವನ್ನು ರಕ್ಷಿಸಬೇಕೆಂದು, ಚನ್ನಪಟ್ಟಣ ತಾಲ್ಲೂಕಿನ ವಿವಿಧ ಸಂಘಟನೆಗಳು ನಗರದ ತಾಲ್ಲೂಕು ಕಛೇರಿಯ ಮುಂಭಾಗ ಕೆಲಕಾಲ ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಉಪ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಿದರು.


ಈ ವೇಳೆ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಮಾತನಾಡಿದ, ರಾಜ್ಯ ರೈತಸಂಘದ ಬೆಂಗಳೂರು ಗ್ರಾಮಾಂತರ ವಿಭಾಗದ ಅಧ್ಯಕ್ಷ ಮಲ್ಲಯ್ಯ ನವರು, ಗಾಂಧಿ ಜಯಂತಿ ಆದ ಮರು ದಿನವೇ ಉತ್ತರ ಪ್ರದೇಶದ ಲಖಿಂಪುರ್ಖೇರಿ ಜಿಲ್ಲೆಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ, ಉಪಮುಖ್ಯಮಂತ್ರಿ ಕೇಶವ ಪ್ರಸಾದಮೌರ್ಯ ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವರಾದ ಅಜಯ್ ಮಿಶ್ರ ಥೇಣಿ ರವರ ಪುತ್ರ ಆಶಿಷ್ ಮಿಶ್ರಾ, ಆತನ ಚಿಕ್ಕಪ್ಪ ಮತ್ತು ಕೆಲ ಗೂಂಡಾಗಳು ಪ್ರತಿಭಟನಾ ನಿರತರ ಮೇಲೆ ಕಾರು ಹರಿಸಿ ನಾಲ್ಕು ಮಂದಿ ರೈತರನ್ನು ದಾರುಣವಾಗಿ ಕೊಲೆಗೈದಿದ್ದಾರೆ. ಸಚಿವರನ್ನು ಸಂಪುಟದಿಂದ ವಜಾಗೊಳಿಸಿ, ಅವರ ಪುತ್ರನ ಮೇಲೆ ಕೊಲೆ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.


ತಾಲ್ಲೂಕು ಅಧ್ಯಕ್ಷ ರಾಮೇಗೌಡ ಮಾತನಾಡಿ, ಹರಿಯಾಣ ರಾಜ್ಯದಲ್ಲೂ ಸಹ ಮುಖ್ಯಮಂತ್ರಿ ಗಳು ಪ್ರತಿಭಟನಾ ನಿರತ ರೈತರ ಮೇಲೆ ಪೋಲಿಸರಿಂದ ದಬ್ಬಾಳಕೆ ನಡೆಸಿದ್ದಾರೆ. ಇಂದಿನ ಸರ್ಕಾರದ ಆಡಳಿತವನ್ನು ನೋಡಿದರೆ ರೈತರಿಗೆ ಉಳಿಗಾಲವಿಲ್ಲ ಎಂಬಂತಾಗಿದೆ. ಕಳೆದ ಹತ್ತು ತಿಂಗಳಿನಿಂದ ಆಹೋರಾತ್ರಿ, ರೈತರು ಪ್ರತಿಭಟನೆ ನಡೆಸುತ್ತಿದ್ದರೂ ಸಹ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಸರ್ಕಾರಕ್ಕೆ ಕಿವಿ ಹಿಂಡಿ ರೈತರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಿದರು.


ಕೆಲಸಮಯ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಸಂಘಟನಾಕಾರರು ಉಪತಹಶೀಲ್ದಾರ್ ಸೋಮೇಶ್ ರವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಕೆ ಎನ್ ರಾಜು, ಅಹಮದ್ ಷರೀಫ್, ವಿನಯ್, ಎಸ್ ಶಿವಕುಮಾರ್, ಕೋದಂಡರಾಮ, ಈರೇಗೌಡ, ಸಿದ್ದರಾಜು, ರವಿ, ರಮೇಶ್, ತಿಮ್ಮೇಗೌಡ, ಬೆಟ್ಟಪ್ಪ, ಶೇಟುವೆಂಕಟೇಶ್, ಪ್ರಸಾದ್, ವಿಜಯಕುಮಾರ್ ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑