Tel: 7676775624 | Mail: info@yellowandred.in

Language: EN KAN

    Follow us :


ನೂತನ ಹೆದ್ದಾರಿಯಲ್ಲಿ ಅವೈಜ್ಞಾನಿಕ ಚರಂಡಿ ನಿರ್ಮಾಣ. ಗದ್ದೆಗೆ ನುಗ್ಗಿದ ನೀರು

Posted date: 20 Oct, 2021

Powered by:     Yellow and Red

ನೂತನ ಹೆದ್ದಾರಿಯಲ್ಲಿ ಅವೈಜ್ಞಾನಿಕ ಚರಂಡಿ ನಿರ್ಮಾಣ. ಗದ್ದೆಗೆ ನುಗ್ಗಿದ ನೀರು

ಚನ್ನಪಟ್ಟಣ.ಅ.20:21. ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಗುತ್ತಿದೆ. ಈ ನಿರ್ಮಾಣದ ಕಾಮಗಾರಿ ವೇಳೆ ಅವೈಜ್ಞಾನಿಕ ಚರಂಡಿ ನಿರ್ಮಾಣ ಮಾಡಿದ ಹಿನ್ನೆಲೆಯಲ್ಲಿ ಮಳೆ ನೀರು ಕೃಷಿ ಜಮೀನಿಗೆ ನುಗ್ಗಿ ತಿಟ್ಟಮಾರನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಹಾಗೂ ರೈತ ಅಜಿತ್ ರವರ 2 ಎಕರೆ ಟೊಮೆಟೋ ಬೆಳೆ ಮಳೆನೀರು ಪಾಲಾಗಿರುವ ಘಟನೆ ನಡೆದಿದೆ.


ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಹಳೆಯ ನಾಲ್ಕು ಪಥದ ರಸ್ತೆಯ ಅಗಲೀಕರಣ ಮಾಡಿ 10 ಪಥದ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. 2022 ರ ಅಕ್ಟೋಬರ್ ಒಳಗೆ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಹೊಂದಲಾಗಿದೆ.

ಈ ರಸ್ತೆ ನಿರ್ಮಾಣ ಕಾಮಗಾರಿಗೆ ರಾಮನಗರ ಜಿಲ್ಲೆಯ ಕೆಲವೆಡೆ ಹೆದ್ದಾರಿ ಬದಿಯಲ್ಲಿ ಚರಂಡಿಗಳನ್ನು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಲಾಗಿದೆ. ಕೆಲವೆಡೆ ಚರಂಡಿಗಳು ಹೆಸರಿಗೆ ಮಾತ್ರ ನಿರ್ಮಾಣವಾಗಿದ್ದು, ಈ ಚರಂಡಿಗಳಲ್ಲಿ ನೀರು ಹರಿಯಲು ಸಾಧ್ಯವಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ.

ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನೀರು ರೈತರ ಜಮೀನುಗಳಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದೆ. ಚನ್ನಪಟ್ಟಣ ತಾಲ್ಲೂಕಿನ ಚಿಕ್ಕನದೊಡ್ಡಿ ಗ್ರಾಮದ ಯುವ ರೈತ ಅಜಿತ್ ಎಂಬಾತನ ೨ ಎಕರೆ ಜಮೀನಿನಲ್ಲಿ ಬೆಳೆದಿದ್ದ ಟೊಮೆಟೋ ಬೆಳೆ ಮಳೆ ನೀರಿನಲ್ಲಿ ಮುಳುಗಿದೆ.

ಇನ್ನೆರಡು ದಿನಗಳಲ್ಲಿ ಕಟಾವಿಗೆ ಸಿದ್ದವಾಗಿದ್ದ ಬೆಳೆ ಕಳೆದುಕೊಂಡು ರೈತ ನಷ್ಟ ಅನುಭವಿಸಿದ್ದಾನೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಟೊಮೆಟೋಗೆ ಉತ್ತಮ ಬೆಲೆ ಸಿಗುತ್ತಿರುವ ಸಮಯದಲ್ಲೇ ಬೆಳೆ ನೀರು ಪಾಲಾಗಿರುವುದು ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ.


ಇದು ಒಬ್ಬ ರೈತನ ಪರಿಸ್ಥಿತಿಯಲ್ಲ, ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿನ ಜಮೀನು ಹೊಂದಿರುವ ಹಲವು ರೈತರ ಪರಿಸ್ಥಿತಿ ಇದೇ ಆಗಿದೆ. ಮಳೆ ನೀರು ಸುಮಾರು 5-6 ಎಕರೆಯಲ್ಲಿ ಅವರಿಸಿಕೊಂಡಿದ್ದು. ವರ್ಷ ದಿಂದ ಶ್ರಮ ಹಾಕಿ ಬೆಳೆದಿದ್ದ ಟೊಮೆಟೋ, ಜೋಳ, ರಾಗಿ ಮತ್ತು ಕಬ್ಬಿನ ಬೆಳೆಗಳು ನಾಶವಾಗಿವೆ.

ಹೆದ್ದಾರಿ ಪ್ರಾಧಿಕಾರದ ಹಣಬಾಕ ಅಧಿಕಾರಿಗಳ ಹೊಣೆಗೇಡಿತನ ಹಾಗೂ ಹೆದ್ದಾರಿ ನಿರ್ಮಾಣದ ಹೊಣೆ ಹೊತ್ತಿರುವ ಡಿಬಿಎಲ್ ಕಂಪನಿಯ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ ಎಂದು ರೈತರು ಆರೋಪಿಸುತ್ತಿದ್ದಾರೆ.


ಅವೈಜ್ಞಾನಿಕ ಕಾಮಗಾರಿ ಯಿಂದಾಗಿ ರೈತರು ಕಷ್ಟ ಪಟ್ಟು ಬೆಳೆದ ಬೆಳೆ ನೀರು ಪಾಲಾಗಿದೆ. ಇದರ ಹೊಣೆ ಯನ್ನು ಸಂಬಂಧಪಟ್ಟವರೇ ಹೊರಬೇಕು. ಬೆಳೆನಷ್ಟ ಪರಿಹಾರ ನೀಡುವಂತೆ ನೊಂದ ರೈತರು ಒತ್ತಾಯಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑