Tel: 7676775624 | Mail: info@yellowandred.in

Language: EN KAN

    Follow us :


ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಸಾವು

Posted date: 22 Oct, 2021

Powered by:     Yellow and Red

ಕೆರೆಯಲ್ಲಿ ಈಜಲು ಹೋದ ಇಬ್ಬರು ಬಾಲಕರು ಸಾವು

ಬಿಡದಿ.ಅ.22/21: ರಾಮನಗರ ತಾಲೂಕಿನ ಕೆಂಚನಗುಪ್ಪೆ ಗ್ರಾಮದ ಕುಂಬಾರಕಟ್ಟೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವಿಗೀಡಾಗಿರುವ ಘಟನೆ ನಡೆದಿದೆ.

ತಾಲೂಕಿನ ಬಿಡದಿ ಪಟ್ಟಣದ ನಿವಾಸಿ, ಬಿಡದಿಯ ಸರಕಾರಿ ಶಾಲೆಯಲ್ಲಿ 5 ನೇ ತರಗತಿ ಓದುತ್ತಿದ್ದ ಕೌಶಿಕ್(11) ಮತ್ತು ಕರಣ್(12) ಮೃತ ಬಾಲಕರು.

ಬಿಡದಿ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.


ಇತ್ತೀಚಿಗೆ ಸುರಿದ ಭಾರಿ ಮಳೆಯಿಂದ ಕುಂಬಾರಕಟ್ಟೆ ಭರ್ತಿಯಾಗಿತ್ತು. ಗುರುವಾರ ಮದ್ಯಾಹ್ನ ಕಟ್ಟೆಯಲ್ಲಿ ಈಜಾಡುತ್ತಿದ್ದ ಬಾಲಕರನ್ನು ಸ್ಥಳೀಯರು ಗದರಿಸಿ ಮನೆಗೆ ಕಳುಹಿಸಿದ್ದರು. ನಂತರ ಸಂಜೆ ವೇಳೆಗೆ ಮತ್ತೆ ವಾಪಸ್ ಬಂದ ಬಾಲಕರು, ಕಟ್ಟೆಯಲ್ಲಿ ಈಜಾಡಲು ಹೋಗಿ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದಾರೆ ರಾತ್ರಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಪೋಷಕರು ಹುಡುಕಾಟ ನಡೆಸಿದ್ದರು.

ಇಂದು ಕುಂಬಾರ ಕಟ್ಟೆಯಲ್ಲಿ ಬಾಲಕರ ಮೃತ ದೇಹಗಳು ಪತ್ತೆಯಾಗಿವೆ. ನುರಿತ ಈಜುಗಾರರಿಂದ ಬಾಲಕರ ಮೃತ ದೇಹಗಳನ್ನು ಹೊರಗೆ ತೆಗೆಯಲಾಗಿದೆ. ಸ್ಥಳಕ್ಕೆ ಬಿಡದಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದು ಮುಂದಿನ ಕ್ರಮ ಕೈಗೊಂಡಿದ್ದಾರೆ.


ಶವಗಳನ್ನು ಮರಣೋತ್ತರ ಪರೀಕ್ಷೆಗೆ ರಾಜರಾಜೇಶ್ವರಿ ಆಸ್ಪತ್ರೆಗೆ ಕಳುಹಿಸಿ ಮರಣೋತ್ತರ ಪರೀಕ್ಷೆ  ನಂತರ ಶವಗಳನ್ನು ವಾರಸುದಾರರಿಗೆ ಹಸ್ತಾಂತರ ಮಾಡಿದ್ದಾರೆ.

ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಕೆರೆಯಲ್ಲಿ ಹೂಳು ತುಂಬಿದ್ದರಿಂದ ಮಳೆಗೆ ಹೊಸ ನೀರು ಬಂದಿದ್ದು ಈಜಾಡುವ ವೇಳೆ ಬದಿಯಲ್ಲಿ ಸಿಲುಕಿ ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑