Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯಲ್ಲಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಅಪರ ಜಿಲ್ಲಾಧಿಕಾರಿ

Posted date: 23 Oct, 2021

Powered by:     Yellow and Red

ಜಿಲ್ಲೆಯಲ್ಲಿ ಅರ್ಥಪೂರ್ಣ ಕನ್ನಡ ರಾಜ್ಯೋತ್ಸವ ಆಚರಿಸಲಾಗುವುದು ಅಪರ ಜಿಲ್ಲಾಧಿಕಾರಿ

ರಾಮನಗರ.ಅ.23:21. ಜಿಲ್ಲಾಡಳಿತದ ವತಿಯಿಂದ ನವೆಂಬರ್ 01 ರಂದು ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಆಚರಿಸಲು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ ಅವರ  ಅಧ್ಯಕ್ಷತೆಯಲ್ಲಿ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕೋವಿಡ್ ಹಿನ್ನಲೆಯಲ್ಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಗುವುದು ಆದರೆ ಕನ್ನಡ ರಾಜ್ಯೋತ್ಸವ ದಿನಾಚರಣೆಯನ್ನು ಕ್ರಮಬದ್ಧವಾಗಿ ಆಚರಣೆಯಾಗಬೇಕು. ಯಾವುದೇ ಲೋಪ ಉಂಟಾಗದಂತೆ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಕೆಲಸ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.


ನವೆಂಬರ್ 01 ರಂದು ಬೆಳಿಗ್ಗೆ 09 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನಡೆಯಲಿದ್ದು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಹಾಜರಾಗಬೇಕು. ಧ್ವಜಾರೋಹಣದ ಸಂಬಂಧ ಮೊದಲೇ ಸಿದ್ಧತೆ ಮಾಡಿಕೊಳ್ಳಿ. ಹೊಸ ಧ್ವಜ ಖರೀದಿಸಿ ಧ್ವಜರೋಹಣದ ಕಂಬದ ಅಳತೆಯನ್ನು ನೋಡಿಕೊಳ್ಳಿ. ಕಚೇರಿ ಕಟ್ಟಡವನ್ನು ದೀಪಾಲಂಕಾರ ಮಾಡಿ ಹಬ್ಬದ ರೀತಿ ಆಚರಿಸಿ. ಗ್ರಾಮ ಪಂಚಾಯಿತಿ ಕಚೇರಿ ಹಾಗೂ ಶಿಕ್ಷಣ ಸಂಸ್ಥೆಗಳಲ್ಲೂ ನವೆಂಬರ್ 01 ರಂದು ಕನ್ನಡ ರಾಜ್ಯೋತ್ಸವ ದಿನಾಚರಣೆ ಯಾವುದೇ ಲೋಪವಾಗದಂತೆ ಆಚರಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.


ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಕ್ರೀಡಾಂಗಣವನ್ನು ಹೂ ಕುಂಡಗಳಿಂದ ಅಲಂಕರಿಸಿ. ಶಾಮಿಯಾನ, ಧ್ವನಿವರ್ಧಕ ಹಾಗೂ ಆಸನದ ವ್ಯವಸ್ಥೆ ಮಾಡಿ. ಕೋವಿಡ್ ಹಿನ್ನಲೆಯಲ್ಲಿ ಸರ್ಕಾರ ನೀಡಿರುವ ಸೂಚನೆಗಳನ್ನು ಪಾಲಿಸಿ ಸಾಮಾಜಿಕ ಅಂತರದೊಂದಿಗೆ ಆಸನದ ವ್ಯವಸ್ಥೆ ಮಾಡಿ, ಕಾರ್ಯಕ್ರಮದ ಮೊದಲು ಹಾಗೂ ನಂತರ ಕಾರ್ಯಕ್ರಮದ ಸ್ಥಳವನ್ನು ಸ್ಯಾನಿಟೈಸ್ ಮಾಡಿ ಎಂದರು.

ಕನ್ನಡ ರಾಜ್ಯೋತ್ಸವ ದಿನದಂದು ನಡೆಯುವ ಎಲ್ಲಾ ಕಾರ್ಯಕ್ರಮಗಳು ಶಿಸ್ತುಬದ್ಧವಾಗಿರಬೇಕು. ರಾಷ್ಟ್ರಗೀತೆ, ನಾಡಗೀತೆ, ಪೆರೇಡ್ ನಡೆಸುವ ಪೊಲೀಸ್, ಎನ್.ಸಿ.ಸಿ, ಎನ್.ಎಸ್.ಎಸ್, ಗೃಹ ರಕ್ಷಕ ದಳ ಹಾಗೂ ಪ್ರವಾಸಿ ಮಿತ್ರರು ಪೂರ್ವಾಭ್ಯಾಸ ನಡೆಸುವಂತೆ ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ರಮೇಶ್, ರಾಮನಗರ ತಹಶೀಲ್ದಾರ್ ವಿಜಯ್ ಕುಮಾರ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಹರೀಶ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑