ಕೆಲಗೆರೆ ಗ್ರಾಮದಲ್ಲಿ ಹಾವು ಕಚ್ಚಿ ವಿದ್ಯಾರ್ಥಿನಿ ಸಾವು

ಚನ್ನಪಟ್ಟಣ: ಮೇ 13 22. ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರ ಪುತ್ರಿಗೆ ಹಾವು ಕಚ್ಚಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.
ತಾಲ್ಲೂಕಿನ ಕೆಲಗೆರೆ ಗ್ರಾಮದ ವಾಟರ್ ಮನ್ ರಮೇಶ್ ರವರಿಗೆ ಇಬ್ಬರು ಮಕ್ಕಳಿದ್ದು ಅವರಲ್ಲಿ ಅರ್ಪಿತಾ (೧೯) ರವರು ನಗರದ ಚನ್ನಾಂಬಿಕಾ ಕಾಲೇಜಿನಲ್ಲಿ ಅಂತಿಮ ಬಿಕಾಂ ಓದುತ್ತಿದ್ದರು. ಇಂದು ಸಂಜೆ ತಮ್ಮ ಮನೆಗೆ ಹೊಂದಿಕೊಂಡಂತೆ ಇದ್ದ ದನದ ಕೊಟ್ಟಿಗೆಗೆ ಮೇವು ಹಾಕಲು ಹೋದಂತಹ ಸಂದರ್ಭದಲ್ಲಿ ಕರಿನಾಗರ ಹಾವೊಂದು ಬಲಗಾಲಿನ ಮೂರನೇ ಬೆರಳಿಗೆ ಕಚ್ಚಿ ಗಾಯಗೊಳಿಸಿದೆ.
ತಕ್ಷಣ ಎಚ್ಚೆತ್ತುಕೊಂಡ ಪೋಷಕರು ಪ್ರಥಮ ಚಿಕಿತ್ಸೆ ಮಾಡಿಕೊಂಡು ನಗರದ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಶವವನ್ನು ಒಪ್ಪಿಸಿದ್ದು ಆಸ್ಪತ್ರೆಯ ಮುಂದೆ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು