Tel: 7676775624 | Mail: info@yellowandred.in

Language: EN KAN

    Follow us :


ಜನಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ ಶಾಸಕಿ ಅನಿತಾ ಕುಮಾರಸ್ವಾಮಿ

Posted date: 17 May, 2022

Powered by:     Yellow and Red

ಜನಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳಿ ಶಾಸಕಿ ಅನಿತಾ ಕುಮಾರಸ್ವಾಮಿ

ರಾಮನಗರ, ಮೇ.17: ನಿಗದಿತ ಅವಧಿಯೊಳಗೆ ತ್ವರಿತವಾಗಿ ಪರಿಹಾರ ದೊರಕಿಸಿಕೊಡುವ ʼಜನ ಸ್ಪಂದನʼ ಕಾರ್ಯಕ್ರಮದ ಪೂರ್ಣ ಪ್ರಯೋಜನ ಪಡೆದುಕೊಂಡು ಯಶ್ವಸಿಗೊಳಿಸುವಂತೆ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ನಗರದ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಮನಗರ ನಗರಸಭೆ, ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ವತಿಯಿಂದ ತಾಲ್ಲೂಕು ಕಛೇರಿ ಆವರಣದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮವನ್ನು ಇಂದು ಉದ್ಘಾಟಿಸಿ ಮಾತನಾಡಿದ ಅವರು, ಸಂಬಂಧಿಸಿದ ಇಲಾಖೆಗಳಿಗೆ ಸಮಸ್ಯೆ ಬಗ್ಗೆ ಮನವಿ ಸಲ್ಲಿಸಿ, ತ್ವರಿತವಾಗಿ ಇಂದಿನ ಜನ ಸ್ಪಂದನ ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ಕಿವಿ ಮಾತು ಹೇಳಿದರು.


ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಅವರು ಮಾತನಾಡಿ ಸಮಸ್ಯೆಯನ್ನು ಪರಿಹರಿಸುವ ಉದ್ದೇಶದಿಂದ ಜನಸ್ಪಂದನ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಇಲ್ಲಿ ಸಲ್ಲಿಸುವ ಅರ್ಜಿಗಳನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ತ್ವರಿತವಾಗಿ ವಿಲೇವಾರಿ ಮಾಡಲಾಗುವುದು ಎಂದರು.


ನಗರಸಭೆ ಅಧ್ಯಕ್ಷೆ ಬಿ. ಸಿ ಪಾರ್ವತಮ್ಮ ಅವರು ಮಾತನಾಡಿ, ಸರ್ಕಾರದಿಂದ ಸಿಗುವ ಯೋಜನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮ ಜರುಗುತ್ತಿದೆ. ಅಧಿಕಾರಿಗಳು ಮನೆ ಮನೆಗೆ ಈ ಮಾಹಿತಿಗಳನ್ನು ತಲುಪಿಸುವಂತೆ ಕೋರಿದರು.

ತಾಲ್ಲೂಕು ಆಡಳಿತ ಆವರಣದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಕಾರ್ಮಿಕ ಇಲಾಖೆ ಮತ್ತು ಮಹಾತ್ಮಾ ಗಾಂಧಿ ನರೇಗಾ ಯೋಜನೆ ಕುರಿತಂತೆ ಸರ್ಕಾರದಿಂದ ಸಿಗುವ ಸೌಲಭ್ಯ ಕುರಿತು ಮಾಹಿತಿ ಕೇಂದ್ರಗಳನ್ನು ತೆರೆಯಲಾಗಿದ್ದು ಸಾರ್ವಜನಿಕರ ಇದರ ಉಪಯೋಗ ಪಡೆದುಕೊಳ್ಳುವಂತೆ ತಹಶೀಲ್ದಾರ್ ಕರೆ ನೀಡಿದರು.

 

ಇದೇ ಸಂದರ್ಭದಲ್ಲಿ ಅರೋಗ್ಯ ಇಲಾಖೆ ವತಿಯಿಂದ ಉಚಿತ ಅರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು.

ಜನಸ್ಪಂದನ ಕಾರ್ಯಕ್ರಮದಲ್ಲಿ ಒಟ್ಟು 80 ಅರ್ಜಿಗಳು ಸ್ವಿಕೃತವಾದವು.

ಕಾರ್ಯಕ್ರಮದಲ್ಲಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಇಕ್ರಮ್, ಅಪರ ಜಿಲ್ಲಾಧಿಕಾರಿ ಜವರೇಗೌಡ ಟಿ, ರಾಮನಗರ ತಾಲ್ಲೂಕು ತಹಶೀಲ್ದಾರ್ ಎಂ. ವಿಜಯ್ ರಾಮನಗರ ನಗರಸಭೆ ಆಯುಕ್ತ ನಂದಕುಮಾರ್, ಉಪವಿಭಾಗಾಧಿಕಾರಿ ಮಂಜುನಾಥ್, ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್ ಹಾಗೂ ವಿವಿಧ ಇಲಾಖೆಯ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑