Tel: 7676775624 | Mail: info@yellowandred.in

Language: EN KAN

    Follow us :


ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ : ಜಿಲ್ಲಾಧಿಕಾರಿ

Posted date: 18 Jun, 2022

Powered by:     Yellow and Red

ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ : ಜಿಲ್ಲಾಧಿಕಾರಿ

ರಾಮನಗರ, ಜೂ. 18: ನೇರವಾಗಿ ಐವತ್ತಕ್ಕೂ ಅರ್ಜಿಗಳು ಬಂದಿವೆ. ವಿವಿಧ ಇಲಾಖೆಗಳಿಗೂ ಅರ್ಜಿಗಳು ಬಂದಿದ್ದು ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿ ಕ್ರಮಕೈಗೊಳ್ಳುತ್ತೇವೆ. ಸರ್ಕಾರದ ವಿವಿಧ ಯೋಜನೆ ಮತ್ತು ಸವಲತ್ತುಗಳಲ್ಲಿನ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಜನಸ್ಪರ್ಶಿಯಾದ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆʼ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅವಕಾಶವಿದೆ. ಜನರು ಇದರ  ಸದುಪಯೋಗ ಪಡೆದುಕೊಳ್ಳಲು ಆಗಮಿಸಿದ್ದಾರೆ. ಅವರೆಲ್ಲರಿಗೂ ನ್ಯಾಯ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು.


ಅವರು ಇಂದು ಚನ್ನಪಟ್ಟಣ ತಾಲ್ಲೂಕಿನ ಬೇವೂರು ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.


ಗ್ರಾಮೀಣ ಭಾಗದಲ್ಲಿನ ಪಿಂಚಣಿ, ಆಶ್ರಯ ಯೋಜನೆ, ಸ್ಮಶಾನ, ಪೌತಿ ಖಾತೆ, ಪಹಣಿ ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಅರ್ಹ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಆರೋಗ್ಯ, ಪೋಲೀಸ್, ಪಂಚಾಯತಿ ಸೇರಿದಂತೆ ಹಲವು ರೀತಿಯ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.


ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಮಾತನಾಡಿ, ಅಧಿಕಾರಿಗಳು ದಿನವಿಡಿ ಗ್ರಾಮವಾಸ್ತವ್ಯ ಮಾಡಿ ಸಾರ್ವಜನಿಕರ ಸಮಸ್ಯೆಗಳನ್ನು ಲಿಖಿತವಾಗಿ ಅಥವಾ ಅರ್ಜಿ ರೂಪದಲ್ಲಿ ಪಡೆದು ಪರಿಹಾರ ಕಲ್ಪಿಸಿಕೊಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಸಾರ್ವಜನಿಕರು ಗ್ರಾಮದ ಕುಂದುಕೊರತೆಗಳಿಗೆ ಪರಿಹಾರ ಕಂಡುಕೊಳ್ಳುವ ಮೂಲಕ ಇಂದಿನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.


ಪೌಷ್ಟಿಕ ಕರ್ನಾಟಕ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳಲ್ಲಿ ಪೋಷಕಾಂಶ ಹೆಚ್ಚಿಸಲು ಸೇವಿಸುವ ಆಹಾರ ಪದಾರ್ಥಗಳನ್ನು ಅನಾವರಣಗೊಳಿಸಲಾಗಿತ್ತು. ಅಂಗನವಾಡಿ ಯಿಂದ ನೀಡಲಾಗುವ ಆಹಾರ ಧಾನ್ಯಗಳಿಂದ ಮಕ್ಕಳಿಗೆ ರುಚಿಕರ ತಿನಸು ಮಾಡಬಹುದು ಎಂದು ತಿಳಿಸುವ ವಸ್ತು ಪ್ರದರ್ಶನ ನೋಡುಗರ ಗಮನ ಸೆಳೆಯುತ್ತಿತ್ತು.


ಬೇವೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಸುಕನ್ಯಾ ಸಮೃದ್ಧಿ ಯೋಜನೆಯಡಿ ಸುಮಾರು 200   ಫಲಾನುಭವಿಗಳಿದ್ದು 10 ಫಲಾನುಭವಿಗಳಿಗೆ  ಜಿಲ್ಲಾಧಿಕಾರಿ ಪಾಸ್ ಬುಕ್ ವಿತರಿಸಿದರು.

ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ತಪಾಸಣೆ, ಮಧುಮೇಹ ಹಾಗೂ ರಕ್ತದೊತ್ತಡ ಪರೀಕ್ಷೆ, ಸೇರಿದಂತೆ  ಫಲಾನುಭವಿಗಳಿಗೆ ಕೋವಿಡ್ ಲಸಿಕೆ ನೀಡಲಾಯಿತು


ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕಾಂತರಾಜ್,  ತಹಶೀಲ್ದಾರ್ ಹರ್ಷವರ್ಧನ್, ತಾಲ್ಲೂಕು ಕಾರ್ಯನಿರ್ವಾಹಕಾಧಿಕಾರಿ ಚಂದ್ರು, ಬೇವೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ವಿವಿಧ ಇಲಾಖೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑