ಹಾವು ಕಚ್ಚಿ ಅರ್ಚಕಿ ಸಾವು

ಚನ್ನಪಟ್ಟಣ: ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೃದ್ಧೆಯೊಬ್ಬರು ಹಾವು ಕಚ್ಚಿ ಮೃತಪಟ್ಟಿರುವ ಘಟನೆ ತಾಲೂಕಿನ ನೇರಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮರಮ್ಮ (೬೮) ಮೃತ ವೃದ್ಧೆ. ಗ್ರಾಮದ ವೈದ್ಯೇಶ್ವರ ದೇವಾಲಯದ ಅರ್ಚಕಿಯಾಗಿದ್ದ ಇವರು ಸೋಮವಾರ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಕೆಲಸ ಮಾಡುವಾಗ ವಿಷಪೂರಿತ ಹಾವೊಂದು ಕಚ್ಚಿದೆ. ಕೂಡಲೇ ಇವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು ಯತ್ನಿಸಲಾದರೂ, ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು