Tel: 7676775624 | Mail: info@yellowandred.in

Language: EN KAN

    Follow us :


ಶಾಂತಿಯುತ ಮತದಾನ ನಡೆಸಲು ಅಧಿಕಾರಿಗಳು ಕ್ರಮವಹಿಸಿ : ಚುನಾವಣಾ ವೀಕ್ಷಕರು

Posted date: 21 Apr, 2023

Powered by:     Yellow and Red

ಶಾಂತಿಯುತ ಮತದಾನ ನಡೆಸಲು ಅಧಿಕಾರಿಗಳು ಕ್ರಮವಹಿಸಿ : ಚುನಾವಣಾ ವೀಕ್ಷಕರು

ರಾಮನಗರ, ಏ. 20: ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಗೆ ನಿಯೋಜನೆಗೊಂಡಿರುವ ಚುನಾವಣಾ ವೆಚ್ಚ ಹಾಗೂ ಸಾಮಾನ್ಯ ವೀಕ್ಷಕರೊಂದಿಗೆ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ಆಯೋಜಿಸಲಾಗಿತ್ತು.


ರಾಮನಗರ ಚುನಾವಣಾ ವೆಚ್ಚ ವೀಕ್ಷಕರಾಗಿ ಉಜ್ವಲ್ ಕುಮಾರ್ ಬಿ. ಚವನ್, ಕನಕಪುರ ಚುನಾವಣಾ ವೆಚ್ಚ ವೀಕ್ಷಕರಾದ ರವಿಕಾಂತ ಚೌಧರಿ, ಚನ್ನಪಟ್ಟಣ ಚುನಾವಣಾ ವೆಚ್ಚ ವೀಕ್ಷಕರಾದ ಶರವಣ್ ರಾಮ್, ಮಾಗಡಿ ಚುನಾವಣಾ ವೆಚ್ಚ ವೀಕ್ಷಕರಾದ ವಿ.ಡಿ.ಎಸ್.ಎಸ್. ನಾಗಾರ್ಜುನ ಗ್ರ್ಯಾಂಡಿ ಹಾಗೂ ಕನಕಪುರ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಸಾಮಾನ್ಯ ವೀಕ್ಷಕರಾದ ಜಿ.ಎಸ್. ಪಾಂಡಾದಾಸ್ ಐ.ಎ.ಎಸ್, ಹಾಗೂ ರಾಮನಗರ ಮತ್ತು ಮಾಗಡಿ ವಿಧಾನಸಭಾ ಕ್ಷೇತ್ರಗಳ ಚುನಾವಣಾ ಸಾಮಾನ್ಯ ವೀಕ್ಷಕರಾದ ಜಿ. ಪ್ರಕಾಶ್ ಐ.ಎ.ಎಸ್, ಜಿಲ್ಲಾ ಪೊಲೀಸ್ ವೀಕ್ಷಕರಾಗಿ ಟಿ.ವಿ. ಸುನಿಲ್ ಕುಮಾರ್ ಐ.ಪಿ.ಎಸ್., ಅವರು ನೇಮಕಗೊಂಡಿರುತ್ತಾರೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ತಿಳಿಸಿದರು.


ಸಭೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ರಾಮನಗರ ಜಿಲ್ಲೆಯ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಕುರಿತು ಪ್ರಾತ್ಯಾಕ್ಷಿಕೆ ನೀಡಿ ಜಿಲ್ಲೆಯಲ್ಲಿ ಒಟ್ಟು 11,50,097 ಜನಸಂಖ್ಯೆಯನ್ನು ಹೊಂದಿದ್ದು, 4 ತಾಲ್ಲೂಕುಗಳಲ್ಲಿ 1139 ಮತಗಟ್ಟೆಗಳನ್ನು ಒಳಗೊಂಡಿದೆ, ದಿನಾಂಕ: 05-01-2023ರ ಅಂತ್ಯಕ್ಕೆ 4,35,572 ಪುರುಷ ಮತದಾರರು ಹಾಗೂ 4,48,472 ಮಹಿಳಾ ಮತದಾರರಿದ್ದು ಒಟ್ಟು 8,84,044 ಮತದಾರರನ್ನು ಒಳಗೊಂಡಿರುತ್ತದೆ. ಇವರಲ್ಲಿ, 1030 ಇತರೆ ಮತದಾರರು ಇದ್ದಾರೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ಚುನಾವಣಾ ವೆಚ್ಚ ವೀಕ್ಷಕರು, ಸಾಮಾನ್ಯ ವೀಕ್ಷಕರು ಹಾಗೂ ಪೊಲೀಸ್ ವೀಕ್ಷಕರು ಮಾತನಾಡಿ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ನಡೆಸಲು ಅಧಿಕಾರಿಗಳು ಕ್ರಮ ವಹಿಸುವಂತೆ ತಿಳಿಸಿದರು.


ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, 4 ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳು, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ದಿನಕರ್ ಶೆಟ್ಟಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನೋಡಲ್ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑