Tel: 7676775624 | Mail: info@yellowandred.in

Language: EN KAN

    Follow us :


ಭೂ ಮಂಜೂರಾತಿ ಕೋರಿಕೆ ಅರ್ಜಿಗಳ ವಿಲೇವಾರಿಗೆ ಕ್ರಮ ಅಶ್ವತ್ಥ ನಾರಾಯಣ ಭರವಸೆ

Posted date: 01 Aug, 2022

Powered by:     Yellow and Red

ಭೂ ಮಂಜೂರಾತಿ ಕೋರಿಕೆ ಅರ್ಜಿಗಳ ವಿಲೇವಾರಿಗೆ ಕ್ರಮ ಅಶ್ವತ್ಥ ನಾರಾಯಣ ಭರವಸೆ

Aswattha Narayan assured action for disposal of land grant request applications

ಹೆಜ್ಜಾಲ (ಬಿಡದಿ ಹೋಬಳಿ): ಭೂ ಮಂಜೂರಾತಿ ಕೋರಿ ರೈತರು ಸಲ್ಲಿಸಿರುವ ನಮೂನೆ 52, 53 ಮತ್ತು 57 ಮಾದರಿಯ ಅರ್ಜಿಗಳನ್ನು ಶೀಘ್ರದಲ್ಲೇ ವಿಲೇವಾರಿ ಮಾಡಿ ಹಕ್ಕುಪತ್ರ ವಿತರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.


ಗ್ರಾಮದ ನಾಡಪ್ರಭು ಕೆಂಪೇಗೌಡ ಸ್ವಾಭಿಮಾನ ಬಳಗ ಭಾನುವಾರ ಏರ್ಪಡಿಸಿದ್ದ ಕೆಂಪೇಗೌಡರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಅವರು ಈ ಭರವಸೆ ನೀಡಿದರು.


ತಮ್ಮ ತವರು ಜಿಲ್ಲೆಯಾದ ರಾಮನಗರದ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರವು ಹಲವು ಯೋಜನೆಗಳನ್ನು ರೂಪಿಸಿದೆ. ರೈತರಿಗೆ ಅನುಕೂಲ ಮಾಡಿಕೊಡಲು ಬೈರಮಂಗಲ ಸೇರಿದಂತೆ ಜಿಲ್ಲೆಯ ನೂರಾರು ಕೆರೆಗಳಿಗೆ ನೀರು ತುಂಬಿಸುವ ಕೆಲಸ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು


ಇದೇ ರೀತಿಯಲ್ಲಿ ಕೆಂಪೇಗೌಡರ ಬದುಕಿಗೆ ಸಂಬಂಧಿಸಿದ ಹಲವು ಸ್ಥಳಗಳನ್ನು ಪಾರಂಪರಿಕ ತಾಣಗಳನ್ನಾಗಿ ಮಾಡಲಾಗುತ್ತಿದೆ. ಹಾಗೆಯೇ ಕೆಂಪಾಪುರದಲ್ಲಿ ವೀರ ಸಮಾಧಿ ಇರುವ ಸ್ಥಳದ ಸುತ್ತಮುತ್ತ ಚೀರ್ಣೋದ್ಧಾರ ಮತ್ತು ಸಮಗ್ರ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಅವರು ನುಡಿದರು.


ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕೆಂಪೇಗೌಡ ಅಧ್ಯಯನ ಕೇಂದ್ರವನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಪಾರಂಪರಿಕ ತಾಣಗಳನ್ನು ಈ ವರ್ಷದ ಅಕ್ಟೋಬರ್ ವೇಳೆಗೆ ಲೋಕಾರ್ಪಣೆ ಮಾಡಲಾಗುವುದು ಎಂದು ಅವರು ಹೇಳಿದರು.


ಜಲಜೀವನ್ ಮಿಷನ್ ಮಿಷನ್ ಯೋಜನೆ ಅಡಿಯಲ್ಲಿ ಜಿಲ್ಲೆಯ ನಾಲ್ಕು ತಾಲೂಕುಗಳ ಪ್ರತಿ ಮನೆಗಳಿಗೂ ನಲ್ಲಿ ನೀರನ್ನು ನದಿ ಮೂಲದಿಂದ ಒದಗಿಸಲಾಗುತ್ತಿದೆ. ಈ ಯೋಜನೆ ಭರದಿಂದ ಸಾಗುತ್ತಿದ್ದು ಕೆಲವೇ ತಿಂಗಳುಗಳಲ್ಲಿ ಮುಗಿಯಲಿದೆ ಎಂದು ಸಚಿವರು ತಿಳಿಸಿದರು.


ಕಾರ್ಯಕ್ರಮದಲ್ಲಿ ವಿಶ್ವ ಒಕ್ಕಲಿಗ ಸಂಸ್ಥಾನದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ,

ಬಳಗದ ಪದಾಧಿಕಾರಿಗಳಾದ ಮಂಜುನಾಥ್ ಕಿರಣ್ ರವಿಕುಮಾರ್ ಜವರೇಗೌಡ ಮತ್ತು ಜಿಲ್ಲಾ ಬಿಜೆಪಿ ಮುಖಂಡ ಡಾ. ಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಬಿಡದಿ ಹೋಬಳಿಯ ಹೆಜ್ಜಾಲ ಗ್ರಾಮದಲ್ಲಿ ಭಾನುವಾರ ನಡೆದ ಕೆಂಪೇಗೌಡ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಸಚಿವ ಡಾಕ್ಟರ್ ಸಿ ಎನ್ ಅಶ್ವತ್ ನಾರಾಯಣ ಪಾಲ್ಗೊಂಡಿದ್ದರು ಈ ಸಂದರ್ಭದಲ್ಲಿ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑