Tel: 7676775624 | Mail: info@yellowandred.in

Language: EN KAN

    Follow us :


ಸ್ಪರ್ಧಾತ್ಮಕ ಯುಗದಲ್ಲಿ ಡಿಜಿಟಲ್ ಗ್ರಂಥಾಲಯ ಸಹಕಾರಿಯಾಗಲಿದೆ; ಉಮಾ ಮಹದೇವನ್

Posted date: 04 Aug, 2022

Powered by:     Yellow and Red

ಸ್ಪರ್ಧಾತ್ಮಕ ಯುಗದಲ್ಲಿ ಡಿಜಿಟಲ್ ಗ್ರಂಥಾಲಯ ಸಹಕಾರಿಯಾಗಲಿದೆ; ಉಮಾ ಮಹದೇವನ್

Ramanagara: Digital library will be helpful in competitive era; Uma Mahadevan

ರಾಮನಗರ, ಆ.04: ಪ್ರತೀ ಗ್ರಾಮ ಪಚಾಯಿತಿಗಳಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯುವುದರಿಂದ ಗ್ರಾಮೀಣ ಭಾಗದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಮತ್ತು ಓದುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಪಂಚಾಯತ್ ರಾಜ್ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ  ಉಮಾ ಮಹದೇವನ್ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ಅವರು ಇಂದು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು,

ಸಿಎಸ್‌ಆರ್ ಅನುದಾನವನ್ನು ಬಳಸಿಕೊಂಡು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುವ ರೀತಿ ಡಿಜಿಟಲ್ ಗ್ರಂಥಾಲಯ ನಿರ್ಮಾಣ ಮಾಡಬೇಕು ಎಂದರು.


ಈಗಾಗಲೇ ಗ್ರಾಮೀಣ ಭಾಗದಲ್ಲಿ ಶೈಕ್ಷಣಿಕ ಮಟ್ಟ ಅಭಿವೃದ್ಧ್ಧಿಗೊಂಡಿದ್ದು, ನಗರಪ್ರದೇಶದ ಜನತೆಗಿಂತ ಗ್ರಾಮೀಣ ಭಾಗದ ಜನರು ಸಾಕ್ಷರತೆಯಲ್ಲಿ ಮುಂದಿದ್ದಾರೆ. ಪರೀಕ್ಷಾರ್ಥಿಗಳು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಡಿಜಿಟಲ್ ಗ್ರಂಥಾಲಯ ತೆರೆಯಲು ನಿಗಾವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣದ ಅವಶ್ಯಕತೆ ತುಂಬಾ ಇದೆ. ಜೊತೆಗೆ ಓದುವ ಆಸಕ್ತಿವುಳ್ಳವರಿಗೂ ಗ್ರಂಥಾಲಯ ಸಹಕಾರಿಯಾಗಲಿದೆ.. ಹೀಗಾಗಿ ಪರೀಕ್ಷಾ ಸಂಬಂಧ ಪುಸ್ತಕಗಳ ಜೊತೆ ಒಳ್ಳೆಯ ಸಾಹಿತ್ಯ ಪುಸ್ತಕಗಳನ್ನು ಶೇಖರಿಸಿಡಿ, ಇದರಿಂದ ಪ್ರತಿಯೊಬ್ಬರೂ ಗ್ರಂಥಾಲಯದ ಕಡೆ ಮುಖ ಮಾಡುತ್ತಾರೆ ಎಂದರು.


ರೈತರಿಗೂ ಡಿಜಿಟಲ್ ಗ್ರಂಥಾಲಯ ಉಪಯುಕ್ತವಾಗುತ್ತೆ ಎಂದ ಉಮಾ ಮಹದೇವನ್, ರೈತರು ಕೃಷಿ ವಿಷಯಗಳ ಬಗ್ಗೆ ತಿಳಿದುಕೊಳ್ಳಲು ಡಿಜಿಟಲ್ ಗ್ರಂಥಾಲಯ ಸಹಾಯವಾಗುತ್ತದೆ. ಅಲ್ಲದೆ, ಮಹಿಳೆಯರಿಗೂ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಯಲ್ಲಿ ಭಾಗವಹಿಸುವಂತೆ ಅಧಿಕಾರಿಗಳು ಮಾಡಬೇಕು, ಎಂದು ನಿರ್ದೇಶನ ನೀಡಿದರು. ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಸರ್ಕಾರಿ ಶಾಲೆಗಳ ಆವರಣದಲ್ಲಿ ನರೇಗಾ ಯೋಜನೆಯಡಿ ಕ್ರೀಡಾಂಗಣ ಅಭಿವೃದ್ಧಿ ಪಡಿಸಬೇಕು. ಗ್ರಂಥಾಲಯಗಳಲ್ಲಿ ಸಾಹಿತ್ಯ ಪುಸ್ತಕ, ಶಾಲಾ ಪುಸ್ತಕ, ಮಕ್ಕಳ ಪುಸ್ತಕ, ಸಂವಿಧಾನ, ದಿನಪತ್ರಿಕೆ ಓದುವುದರಿಂದ ರಾಜ್ಯ, ದೇಶ, ವಿದೇಶದಲ್ಲಿ ನಡೆಯುವ ವಿದ್ಯಾಮಾನಗಳನ್ನು ಪರೀಕ್ಷಾರ್ಥಿಗಳು, ವಿದ್ಯಾರ್ಥಿಗಳು, ಅಕ್ಷರ ಬಲ್ಲ ರೈತರು ತಿಳಿದುಕೊಳ್ಳುತ್ತಾರೆ ಹೀಗಾಗಿ ಈ ವಿಚಾರವಾಗಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಸೂಚಿಸಿದರು.


ಸಭೆಯಲ್ಲಿ ರಾಮನಗರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ದಿಗ್ವಿಜಯ್ ಬೋಡ್ಕೆ , ಜಿ.ಪಂ.ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಮುಖ್ಯ ಯೋಜನಾಧಿಕಾರಿ ಚಿಕ್ಕಸುಬ್ಬಯ್ಯ, ಸಹಾಯಕ ಕಾರ್ಯದರ್ಶಿ ಮಮತಾ ಹಾಗೂ  ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑