Tel: 7676775624 | Mail: info@yellowandred.in

Language: EN KAN

    Follow us :


ಎರಡು ದಿನ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

Posted date: 12 May, 2023

Powered by:     Yellow and Red

ಎರಡು ದಿನ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ರಾಮನಗರ, ಮೇ 12:  ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023 ರ ಸಂಬಂಧ ಮೇ 13 ರಂದು ರಾಮನಗರ ಜಿಲ್ಲೆಗೆ ಸಂಬಂಧಿಸಿದಂತೆ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ರಾಮನಗರ ಇಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, ಮತ ಎಣಿಕೆ ಕಾರ್ಯವನ್ನು ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದಂತೆ ಕ್ರಮವಹಿಸಲು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಆದೇಶಿಸಿದ್ದಾರೆ.


ಮೇ 13 ರಂದು ಸರ್ಕಾರಿ ಇಂಜಿನಿಯರಿಂಗ್ ಕಾಲೇಜು, ರಾಮನಗರ ಇಲ್ಲಿ ನಡೆಯಲಿರುವ ಮತ ಎಣಿಕೆ ಕಾರ್ಯ ನಿಮಿತ್ತ ಯಾವುದೇ ವ್ಯಕ್ತಿ/ರಾಜಕೀಯ ಪಕ್ಷದ ಪ್ರತಿನಿಧಿಗಳು ಮತ್ತು ಏಜೆಂಟರ್‌ಗಳು ಮತ ಎಣಿಕೆ ಕೇಂದ್ರದ ಮುಖ್ಯದ್ವಾರದಿಂದ ಮೊಬೈಲ್ ಪೋನ್ ತರುವುದನ್ನು/ಬಳಸುವುದನ್ನು ನಿಷೇಧಿಸಿದೆ. ಜಿಲ್ಲಾದ್ಯಂತ ಹಾಗೂ ಮತ ಎಣಿಕೆ ಕೇಂದ್ರದ ಸುತ್ತ ಯಾವುದೇ ರೀತಿಯ ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ. ಜಿಲ್ಲಾದ್ಯಂತ ಹಾಗೂ ಮತ ಎಣಿಕೆ ಕೇಂದ್ರದ ಸುತ್ತ ಯಾವುದೇ ಸಂಭ್ರಮಾಚರಣೆ, ಮೆರವಣಿಗೆ ಮಾಡುವುದನ್ನು ನಿಷೇಧಿಸಿದೆ ಎಂದು ತಿಳಿಸಿದ್ದಾರೆ. 


ಜಿಲ್ಲಾದ್ಯಂತ ಮೇ 12ರ ಮಧ್ಯರಾತ್ರಿ 12 ಗಂಟೆಯಿಂದ ಮೇ 14ರ ಮಧ್ಯಾಹ್ನ 12 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ನಿಷೇಧಾಜ್ಞೆಯ ನಿಬಂಧನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಜಿಲ್ಲಾದ್ಯಂತ ಯಾವುದೇ ಧ್ವನಿವರ್ದಕಗಳನ್ನು ಹಾಗೂ ಡಿ.ಜೆ ಗಳನ್ನು ಬಳಸುವುದನ್ನು ನಿಷೇಧಿಸಿದೆ ಎಂದು ತಿಳಿಸಿದ್ದಾರೆ.


ಜಿಲ್ಲಾದ್ಯಂತ ಮೇ 13ರ ಬೆಳಿಗ್ಗೆ 12.01 ರಿಂದ ಮೇ 14ರ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ/ಹಂಚಿಕೆ/ಸಾಗಾಣಿಕೆಯನ್ನು ನಿಷೇಧಿಸಲಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑