ಶಿಸ್ತು ಮತ್ತು ಶ್ರದ್ಧೆ ಇದ್ದರೆ ಅಸಾಧ್ಯವಾದುದನ್ನು ಸಾಧಿಸಬಹುದು. ಸಾಹಿತಿ ವಿಜಯ್ ರಾಂಪುರ

ಚನ್ನಪಟ್ಟಣ :ಪ್ರತಿ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಶಿಸ್ತು ಮತ್ತು ಶ್ರದ್ಧೆಯ ಜೊತೆಗೆ ಸಮಯ ಪಾಲನೆ ರೂಢಿಸಿಕೊಂಡಲ್ಲಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಮೂಲಾಗ್ರ ಬದಲಾವಣೆ ಕಂಡುಕೊಳ್ಳಲು ಸಾಧ್ಯ ಎಂದು ಸಾಹಿತಿ ವಿಜಯ್ ರಾಂಪುರ ತಿಳಿಸಿದರು.
ಅವರು ಪಟ್ಟಣದ ರಾಜಾಕೆಂಪೇಗೌಡ ಬಡಾವಣೆಯಲ್ಲಿ ರಾಂಪುರದ ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ, ಪವಿತ್ರ ಮತ್ತು ಶಿಕ್ಷಕ ಸಿದ್ದರಾಜು ಅವರ ಪುತ್ರಿ ಕುಮಾರಿ ಎಂ.ಎಸ್. ತಶ್ವಿನಿ ಅವರನ್ನು ಸನ್ಮಾನಿಸಿ ಮಾತನಾಡಿದರು.
ತಶ್ವಿನಿ ಅವರು ಹತ್ತನೇ ತರಗತಿ ಪರೀಕ್ಷೆಯಲ್ಲಿ 625ಕ್ಕೆ 606 ಅಂಕಗಳನ್ನು ಗಳಿಸುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾಳೆ. ಎಳವೆಯಿಂದಲೂ ವಾಚನಾಭಿರುಚಿಯ ಜೊತೆಗೆ ಕಲೆ, ಸಾಹಿತ್ಯ ಮತ್ತು ಸಂಗೀತದಲ್ಲಿ ಸಹ ವಿಶೇಷ ಅಭಿರುಚಿ ಬೆಳೆಸಿಕೊಂಡಿದ್ದಾಳೆ.
ಇಂತಹ ಬಹುಮುಖ ಪ್ರತಿಭೆಗಳನ್ನು ಎಳವೆಯಲ್ಲಿಯೇ ಗುರುತಿಸಿ ಪ್ರೋತ್ಸಾಹಿಸುವ ಕಾರ್ಯವನ್ನು ನೇಗಿಲಯೋಗಿ ಸಾಂಸ್ಕೃತಿಕ ಟ್ರಸ್ಟ್ ಹಲವಾರು ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ ಎಂದರು.
ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾದುದು. ವಿದ್ಯೆಯಿಂದ ಸಕಲವನ್ನೂ ಗಳಿಸಿ, ಸಾಮಾಜಿಕ ಗೌರವಕ್ಕೆ ಪಾತ್ರರಾಗಬಹುದು. ಕುಮಾರಿ ತಶ್ವಿನಿ ಅವರ ಸಾಧನೆ, ಕಿರಿಯರಿಗೆ ಮಾದರಿಯಾಗಿದೆ ಎಂದರು.
ಈ ಸಂದರ್ಭದಲ್ಲಿ ಹಿರಿಯ ಜಾನಪದ ಕಲಾವಿದ ಚೌ.ಪು. ಸ್ವಾಮಿ, ಟ್ರಸ್ಟ್ ಖಜಾಂಚಿ ಅನಿತಾ ವಿಜಯ್, ಅಚಲ ಆರ್.ವಿ., ಶಿಕ್ಷಕ ಮೊಗೇನಹಳ್ಳಿ ಸಿದ್ದರಾಜು, ಪವಿತ್ರ ಮತ್ತಿತರರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು