Tel: 7676775624 | Mail: info@yellowandred.in

Language: EN KAN

    Follow us :


ಹನುಮಾಪುರದೊಡ್ಡಿ ಗ್ರಾಮದಲ್ಲಿನ ಸ್ಮಶಾನ ಖಾಸಗಿ ವ್ಯಕ್ತಿ ಪಾಲು. ತಾಲ್ಲೂಕು ಕಛೇರಿ ಮುಂದೆ ಶವವಿಟ್ಟು ಪ್ರತಿಭಟನೆ

Posted date: 09 Aug, 2022

Powered by:     Yellow and Red

ಹನುಮಾಪುರದೊಡ್ಡಿ ಗ್ರಾಮದಲ್ಲಿನ ಸ್ಮಶಾನ ಖಾಸಗಿ ವ್ಯಕ್ತಿ ಪಾಲು. ತಾಲ್ಲೂಕು ಕಛೇರಿ ಮುಂದೆ ಶವವಿಟ್ಟು ಪ್ರತಿಭಟನೆ

ಚನ್ನಪಟ್ಟಣ.ಆ.೦೯: ತಾಲೂಕಿನ ಹನುಮಾಪುರದದೊಡ್ಡಿ ಗ್ರಾಮದಲ್ಲಿ  ಸ್ಮಶಾನ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಆಕ್ರಮಿಸಿಕೊಂಡು, ಶವಸಂಸ್ಕಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಶವವನ್ನು ನಗರದ ತಾಲೂಕು ಕಚೇರಿ ಮುಂಭಾಗವಿಟ್ಟು ಪ್ರತಿಭಟನೆ ನಡೆಸಿದರು.


ಗ್ರಾಮದ ಕರಿಯಪ್ಪ(೬೦) ಎಂಬುವವರು ನೆನ್ನೆ ರಾತ್ರಿ ಮೃತಪಟ್ಟಿದ್ದರು. ಗ್ರಾಮದಲ್ಲಿ ರುವ ಸ್ಮಶಾನದ ಜಾಗವನ್ನು ಕೆಲವರು ಇದು ನಮ್ಮ ಖಾಸಗಿ ಜಮೀನು ಎಂದು ಸ್ವಾಧೀನ ಪಡೆಸಿಕೊಂಡಿದ್ದಾರೆ. ಇದು ಅಂತ್ಯಸಂಸ್ಕಾರಕ್ಕೆ ತೊಂದರೆ ಉಂಟು ಮಾಡುತ್ತಿದೆ. ಹಲವು ವರ್ಷಗಳಿಂದ ಗ್ರಾಮಸ್ಥರು ಸ್ಮಶಾನವಾಗಿ ಉಪಯೋಗಿಸುತ್ತಿದ್ದ ಜಾಗವನ್ನು ಖಾಸಗಿಯವರು ಸ್ವಾಧೀನ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ದೂರಿದ್ದಾರೆ.


ಈ ಬಗ್ಗೆ ಈ ಹಿಂದೆ ಹಲವು ಪ್ರತಿಭಟನೆಗಳೂ ಸಹ ನಡೆದಿವೆ. ಕೆಲ ತಿಂಗಳ ಹಿಂದೆ ಇದೇ ರೀತಿಯಾದ ಸಮಸ್ಯೆ ಉದ್ಭವಿಸಿ, ಶವವನ್ನು ನಗರದ ತಾಲೂಕು ಕಚೇರಿಗೆ ತರುವಾಗ ಅಂದಿನ ತಹಸೀಲ್ದಾರ್ ಹಾಗೂ ಪೊಲೀಸರು ಮಾರ್ಗ ಮಧ್ಯೆಯೇ ಶವದ ವಾಹನವನ್ನು ತಡೆಹಿಡಿದು ಸಮಸ್ಯೆಯನ್ನು ಪರಿಹರಿಸಿದ್ದರು. ಇದೀಗ, ಶವಸಂಸ್ಕಾರಕ್ಕೆ ಮತ್ತೆ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಮತ್ತೆ ಪ್ರತಿಭಟನೆ ನಡೆಸಿದರು.


ಇಲ್ಲಿನ ತಾಲ್ಲೂಕು ಕಛೇರಿ ಬಳಿ ೧೦ ಗಂಟೆಯವರೆಗೂ ಶವವನ್ನು ಇಟ್ಟು ಪ್ರತಿಭಟನೆ ನಡೆಸಿದ ಗ್ರಾಮಸ್ಥರು, ಮೊಹರಂ ಪ್ರಯುಕ್ತ ರಜೆ ಇದ್ದುದರಿಂದ ಅಧಿಕಾರಿಗಳ ಸಮರ್ಪಕ ಸ್ಪಂದನ ಸಿಗಲಿಲ್ಲ. ತಹಶೀಲ್ದಾರ್ ಸುದರ್ಶನ್ ಶವ ಸಂಸ್ಕಾರಕ್ಕೆ ಗ್ರಾಮದಲ್ಲಿಯೇ ಜಾಗ ಗುರುತಿಸುವುದಾಗಿ ಹೇಳಿದ್ದರಿಂದ ಶವವನ್ನು ಹಿಂದಕ್ಕೆ ತೆಗೆದುಕೊಂಡು ಹೋಗಿ ಶವಸಂಸ್ಕಾರ ನೆರವೇರಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑