ಹಿಂದೂ ರಾಷ್ಟ್ರದಲ್ಲಿ ಅಸ್ತಿತ್ವ ಉಳಿಸಿಕೊಳ್ಳಲು ಸಾತ್ತ್ವಿಕರಾಗಿ - ರಮಾನಂದಗೌಡ

ಚನ್ನಪಟ್ಟಣ: ಹಿಂದೂ ರಾಷ್ಟ್ರ ಎಂದರೆ ಸಾತ್ವಿಕ ಜನತೆಯುಳ್ಳ ರಾಷ್ಟ್ರವಾಗಿರುತ್ತದೆ. 2025ನೇ ವರ್ಷದಲ್ಲಿ ಭಾರತದಲ್ಲಿ ವಿಶಾಲ ಹಿಂದೂ ರಾಷ್ಟ್ರ ಸ್ಥಾಪನೆಯಾಗಲಿದೆ ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ರಮಾನಂದಗೌಡ ಅವರು ತಿಳಿಸಿದರು. ಚನ್ನಪಟ್ಟಣದಲ್ಲಿ ಆಜಾದ್ ಬ್ರಿಗೇಡ್, ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ನಡೆದ ಹಿಂದೂ ರಾಷ್ಟ್ರ ಸ್ಥಾಪಿಸಲು ಧರ್ಮ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅನೇಕ ಸಂತರು ನುಡಿದಿರುವಂತೆ ಹಿಂದೂ ರಾಷ್ಟ್ರದ ಸ್ಥಾಪನೆಯ ಮೊದಲು ಭೀಕರ ಆಪತ್ಕಾಲ ಬಂದೆರಗಲಿದೆ. ಈ ಸಾತ್ವಿಕ ರಾಷ್ಟ್ರದಲ್ಲಿ ನಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹಿಂದಿನಿಂದಲೇ ಆಧ್ಯಾತ್ಮಿಕ ಸಾಧನೆಯನ್ನು ಆರಂಭಿಸಿ ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕಿದೆ ಎಂದು ಸನಾತನ ಸಂಸ್ಥೆಯ ಧರ್ಮಪ್ರಚಾರಕರಾದ ರಮಾನಂದಗೌಡ ನೆರೆದಿದ್ದ ಸಭಿಕರಿಗೆ ಕರೆ ನೀಡಿದರು.
ಹಿಂದೆ ಗುರುವಿನ ಮೂಲಕ ಜ್ಞಾನವನ್ನು ಪಡೆದು ಶಿಷ್ಯರು ಸಾಧನೆಯನ್ನು ಮಾಡುತ್ತಿದ್ದರು. ಭಾರತದಲ್ಲಿ ಗುರುವಿಗೆ ಅಗ್ರ ಸ್ಥಾನವಿದೆ. ಛತ್ರಪತಿ ಶಿವಾಜಿ ಮಹಾರಾಜರು ಮತ್ತು ಹಕ್ಕ ಬುಕ್ಕರು ಸಹ ತಮ್ಮ ರಾಜ್ಯ ಸ್ಥಾಪನೆಯನ್ನು ಮಾಡುವಾಗ ಗುರುಗಳ ಮಾರ್ಗದರ್ಶನ ಪಡೆದು ಮಾಡಿದರು. ಇದರಿಂದಾಗಿ ಅವರ ಧರ್ಮಸಂಸ್ಥಾಪನೆಯ ಕಾರ್ಯವು ಪೂರ್ಣವಾಯಿತು. ಅನೇಕ ಸಂತರು ಭಾರತವು 2025 ಕ್ಕೆ ಹಿಂದೂ ರಾಷ್ಟ್ರವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. "ಧರ್ಮೋ ರಕ್ಷತಿ ರಕ್ಷಿತಃ" ಅಂದರೆ ಧರ್ಮ ಉಳಿಯಬೇಕಾದರೆ ನಾವೆಲ್ಲ ಹಿಂದೂಗಳು ಧರ್ಮಾಚರಣೆಯನ್ನು ಮಾಡಬೇಕು ಮತ್ತು ಆಧ್ಯಾತ್ಮಿಕ ಸಾಧನೆಯನ್ನು ಹೆಚ್ಚಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಮೋಹನಗೌಡ, ಗಜೇಂದ್ರ ಸಿಂಗ್, ಸುರೇಶ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು