ಟಿಎಪಿಸಿಎಂಎಸ್ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಮೆಹರೀಶ್

ಚನ್ನಪಟ್ಟಣ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾಗಿ ಮತ್ತೀಕೆರೆ ಗ್ರಾಮದ ಮೆಹರೀಶ್ (ಮನು) ರವರು ಸೋಮವಾರ ಅವಿರೋಧವಾಗಿ ಆಯ್ಕೆಯಾದರು.
ಈ ವೇಳೆ ನೂತನ ಅಧ್ಯಕ್ಷ ಮೆಹರೀಶ್ ಮಾತನಾಡಿ ನನ್ನನ್ನು ಅಧ್ಯಕ್ಷನಾಗಿ ಆಯ್ಕೆಮಾಡಲು ಸಹಕರಿಸಿದ ಮಾಜಿ ಮುಖ್ಯಮಂತ್ರಿ, ಕ್ಷೇತ್ರದ ಶಾಸಕರಾದ ಹೆಚ್ ಡಿ ಕುಮಾರಸ್ವಾಮಿ, ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾದ ಹೆಚ್ ಸಿ ಜಯಮುತ್ತುಗೆ ಧನ್ಯವಾದವನ್ನು ತಿಳಿಸಿದರು.
ನೂತನ ಅಧ್ಯಕ್ಷರಿಗೆ ಜೆಡಿಎಸ್ ಮುಖಂಡರು ಸಿಹಿ ತಿನ್ನಿಸುವ ಮೂಲಕ ಸಂಭ್ರಮವನ್ನು ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಬಿ ಡಿ ಸಿ ಸಿ ಬ್ಯಾಂಕ್ ನಿರ್ದೇಶಕರಾದ ಕುಕ್ಕೂರುದೊಡ್ಡಿ ಜಯರಾಮು, ಮಾಜಿ ಪಿ ಎಲ್ ಡಿ ಬ್ಯಾಂಕ್ ಅಧ್ಯಕ್ಷರಾದ ಗೋವಿಂದಹಳ್ಳಿ ನಾಗರಾಜು, ಬೋರ್ವೇಲ್ ರಾಮಚಂದ್ರು ಹಾಗೂ ಟಿ ಎ ಪಿ ಸಿ ಎಂ ಎಸ್ ಉಪಾಧ್ಯಕ್ಷರಾದ ಬಿಳಿಯಪ್ಪ , ಟಿ ಎ ಪಿ ಸಿ ಎಂ ಎಸ್ ನಿರ್ದೇಶಕರುಗಳಾದ ಶ್ರೀನಿವಾಸ್, ರಾಜಶೇಖರ್, ಮಧುಕರ್ ಮುಂತಾದವರು ಉಪಸ್ಥಿತರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು