ತಗಚಗೆರೆ ಗ್ರಾಪಂ ಗೆ ಭೇಟಿ ನೀಡಿದ ಜಿಪಂ ಸಿಇಓ

ಚನ್ನಪಟ್ಟಣ: ತಾಲ್ಲೂಕಿನ ತಗಚಗೆರೆ ಗ್ರಾಮ ಪಂಚಾಯಿತಿಗೆ ಇಂದು ಜಿಲ್ಲಾ ಪಂಚಾಯಿತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಭೇಟಿ ನೀಡಿ ವಿವಿಧ ಯೋಜನೆಗಳ ಕಡತಗಳನ್ನು ಪರಿಶೀಲಿಸಿದರು.
ನರೇಗಾ ಯೋಜನೆಯಡಿ ನಿರ್ಮಾಣವಾಗಿರುವ ಅಮೃತ ಸರೋವರ ಹಾಗೂ 15ನೇ ಹಣಕಾಸು ಯೋಜನೆಯಡಿ ನಿರ್ಮಾಣವಾಗಿರುವ ಶೌಚಾಲಯವನ್ನು ವೀಕ್ಷಿಸಿದರು. ಇದೇ ವೇಳೆ ಅಧಿಕಾರಿಗಳ ಜೊತೆಗೆ ಮಾತನಾಡಿ ನರೇಗಾ ಕಾಮಗಾರಿಗಳ ಬಗ್ಗೆ ಗಮನ ಹರಿಸುವ ಮೂಲಕ ಮತ್ತಷ್ಟು ಅಭಿವೃದ್ಧಿ ಮಾಡಿ ಎಂದು ಸೂಚನೆಯನ್ನು ನೀಡಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ, ತಾಲ್ಲೂಕು ತಾಂತ್ರಿಕ ಸಂಯೋಜಕರು ಹಾಗೂ ಇತರ ಸಿಬ್ಬಂದಿಗಳು ಹಾಜರಿದ್ದರು.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು