Tel: 7676775624 | Mail: info@yellowandred.in

Language: EN KAN

    Follow us :


ವಿಕಲಚೇತನರಿಂದ ಅರ್ಜಿ ಆಹ್ವಾನ

Posted date: 04 Jun, 2023

Powered by:     Yellow and Red

ವಿಕಲಚೇತನರಿಂದ ಅರ್ಜಿ ಆಹ್ವಾನ

ರಾಮನಗರ, ಜೂ. 03:      ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ ನಗರಸಭೆ/ ಪುರಸಭೆಗಳಲ್ಲಿ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಗ್ರಾಮೀಣ/ ನಗರ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸಲು ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.   


ಅಂಗವಿಕಲರ ಗ್ರಾಮೀಣ ಪುನರ್ವಸತಿ ಯೋಜನೆಯು 2007-08ನೇ ಸಾಲಿನಿಂದ ರಾಜ್ಯದಲ್ಲಿ ಅನುಷ್ಠಾನದಲ್ಲಿದ್ದು, ಈ ಯೋಜನೆಯಡಿ ರಾಮನಗರ ಜಿಲ್ಲೆಯಲ್ಲಿನ ಕನಕಪುರ, ರಾಮನಗರ, ಚನ್ನಪಟ್ಟಣ ಹಾಗೂ ಮಾಗಡಿ ತಾಲ್ಲೂಕುಗಳ ಗ್ರಾಮ ಪಂಚಾಯಿತಿ/ನಗರಸಭೆ/ಪುರಸಭೆಗಳಲ್ಲಿ ಪ್ರಸ್ತುತ ಖಾಲಿ ಇರುವ ಗ್ರಾಮೀಣ/ನಗರ ಪುನರ್ವಸತಿ ಕಾರ್ಯಕರ್ತರ (ಗಿಖW&UಖW) ಹುದ್ದೆಗಳಿಗೆ ಮಾಹೆಯಾನ 9,000 ರೂ.ಗಳ ಗೌರವಧನದ ಆಧಾರದ ಮೇಲೆ ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.


ಆಸಕ್ತ ವಿಕಲಚೇತನರು ಅರ್ಜಿಯನ್ನು ಜುಲೈ 3 ರೊಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ನಂ. 107, ನೆಲಮಹಡಿ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ಬಿ.ಎಂ ರಸ್ತೆ, ರಾಮನಗರ ಜಿಲ್ಲೆ, ಇವರಿಗೆ ಖುದ್ದಾಗಿ ಸಲ್ಲಿಸಲು ತಿಳಿಸಿದೆ.


ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ 080-29500205, 080-27273025 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑