Tel: 7676775624 | Mail: info@yellowandred.in

Language: EN KAN

    Follow us :


ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

Posted date: 08 Jun, 2023

Powered by:     Yellow and Red

ಶ್ರೀಗಿರಿಪುರ ಗ್ರಾಪಂ ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆದ ಆರೋಗ್ಯ ತಪಾಸಣಾ ಶಿಬಿರ

ರಾಮನಗರ, ಜೂ. 07:   ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾತ್ಮಗಾಂಧಿ ನರೇಗಾ ಉದ್ಯೋಗ ಖಾತ್ರಿ ಯೋಜನೆ ಹಾಗೂ ಕುದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಕಾರದೊಂದಿಗೆ ಶ್ರೀಗಿರಿಪುರ ಗ್ರಾಮ ಪಂಚಾಯ್ತಿಯ ಸಭಾಂಗಣದಲ್ಲಿ ಗ್ರಾಮ ಪಂಚಾಯ್ತಿ ಆರೋಗ್ಯ ಅಮೃತ ಅಭಿಯಾನ ಅಡಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.


ಗ್ರಾಮ ಪಂಚಾಯ್ತಿ ಅಧ್ಯಕ್ಷರಾದ ಪ್ರೇಮಾ ರಮೇಶ್ ಅವರು ಶಿಬಿರಕ್ಕೆ ಚಾಲನೆ ನೀಡಿ, ಸಮುದಾಯದ ಜನರಿಗೆ ಆರೋಗ್ಯದ ಸದೃಡ ಬೆಳವಣಿಗೆಗೆ ಸಹಕಾರಿಯಾಗುವಂತಹ ಈ ಕಾರ್ಯಕ್ರಮದ ದೂರದೃಷ್ಠಿಕೋನವನ್ನು  ಪ್ರತಿಯೊಬ್ಬರಿಗೂ ವ್ಯವಸ್ಥಿತವಾಗಿ ತಲುಪಿಸುವ ನಿಟ್ಟಿನಲ್ಲಿ ಪಂಚಾಯ್ತಿ ಆಡಳಿತ ವರ್ಗವು ಕಾರ್ಯ ಪ್ರವೃತ್ತರಾಗಬೇಕು ಹಾಗೂ  ಪ್ರತಿಯೊಬ್ಬರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ತಿಳಿಸಿದರು.


ಆರೋಗ್ಯ ಸುರಕ್ಷಾಧಿಕಾರಿ ಆಶಾ ಅವರು ಮಾತನಾಡಿ, 30 ವರ್ಷ ಮೇಲ್ಪಟ್ಟವರು ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳಬೇಕು ಜೊತೆಗೆ ಆರೋಗ್ಯದ ಕುರಿತಂತೆ ಸ್ವ ಅರಿವು ಕೂಡ ಬೆಳಸಿಕೊಳ್ಳಬೇಕು. ಆರೋಗ್ಯ ಸೇವಾ ಯೋಜನೆಗಳು ಜನ ಸಮುದಾಯಕ್ಕೆ ಪ್ರತಿನಿಧಿಗಳ ಮೂಲಕ ಮನೆ ಮನೆ ಬಾಗಿಲಿಗೆ ತಲುಪುತ್ತಿರುವುದು ಸ್ವಾಗತಾರ್ಹವಾದ್ದದ್ದು, ಇಂತಹ ಅನುಕೂಲತೆಗಳನ್ನ ನರೇಗಾ ಕೂಲಿ ಕಾರ್ಮಿಕರಿಗೆ ಹಾಗೂ ಗ್ರಾಮಸ್ಥರು ಆರೋಗ್ಯ ತಪಾಸಣೆ ಶಿಬಿರದ ಆಯೋಜನೆಯಲ್ಲಿ ಪಾಲ್ಗೊಂಡು ಮಧುಮೇಹ, ರಕ್ತದೊತ್ತಡ, ಕ್ಷಯ, ರಕ್ತಹೀನತೆ, ಅಪೌಷ್ಠಿಕತೆಯಂತಹ  ಆರೋಗ್ಯ ಸಮಸ್ಯೆಗಳನ್ನು ಪ್ರಾಥಮಿಕ ಹಂತದಲ್ಲಿ ಗುರುತಿಸಿಕೊಂಡು ಸೂಕ್ತ ಚಿಕಿತ್ಸಾ ವಿಧಾನಗಳಿಂದ  ನಮ್ಮ ಆರೋಗ್ಯವನ್ನು ಸುಸ್ಥಿರವಾಗಿಟ್ಟುಕೊಳ್ಳಬೇಕು. ಕೂಲಿಕಾರ್ಮಿಕರು ಸೇರಿದಂತೆ ಎಲ್ಲಾ ಸಾರ್ವಜನಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು.


ಶಿಬಿರದಲ್ಲಿ ತಾಲ್ಲೂಕು ಸಂಯೋಜಕರರಾದ ಉಮೇಶ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಸವರಾಜು, ಉಪಾಧ್ಯಕ್ಷೆ ಸುಮಾ ಚಂದ್ರಶೇಖರ್, ಕಾರ್ಯದರ್ಶಿ ಯಶೋಧ, ಸದಸ್ಯರುಗಳಾದ ಮಂಜನಾಥ್, ಪ್ರಕಾಶ್, ಜಯಮ್ಮ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಲೋಕೇಶ್, ಆರೋಗ್ಯ ಸುರಕ್ಷಾತಾಧಿಕಾರಿ ಅನಿತಾ ಲಕ್ಷ್ಮೀ, ಬಿಲ್ ಕಲೆಕ್ಟರ್ ಸರಸ್ವತಮ್ಮ, ಯಶೋಧ ಸೇರಿದಂತೆ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑