ಪಜಾ ಮತ್ತು ಪಪಂ ದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ರಾಮನಗರ, ಜೂ. 17: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಪಿ.ಯು.ಸಿ/ಡಿಪ್ಲೊಮಾ/ಪದವಿ/ಸ್ನಾತಕೋತ್ತರ ಪದವಿ/ಇಂಜಿನಿಯರಿಂಗ್/ಮೆಡಿಕಲ್ ಕೋರ್ಸ್ ಗಳಲ್ಲಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು 2023ರ ಆಗಸ್ಟ್ 31 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿರುತ್ತದೆ.
ಪರಿಶಿಷ್ಟ ಜಾತಿ (ಎಸ್.ಸಿ)ಗೆ ಸೇರಿದ ವಿದ್ಯಾರ್ಥಿಗಳು www.sw.kar.nic.in ಮೂಲಕ ಹಾಗೂ ಪರಿಶಿಷ್ಟ ಪಂಗಡ (ಎಸ್.ಟಿ)ಕ್ಕೆ ಸೇರಿದ ವಿದ್ಯಾರ್ಥಿಗಳು tw.kar.nic.in ಮೂಲಕ ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ನಂತರ ಡೌನ್‌ಲೋಡ್ ಮಾಡಿದ ಅರ್ಜಿ ಮತ್ತು ಅಗತ್ಯ ದಾಖಲೆಗಳ ಪ್ರತಿಯೊಂದಿಗೆ ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಾಮನಗರ ಜಿಲ್ಲೆ ಮತ್ತು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಾಮನಗರ, ಚನ್ನಪಟ್ಟಣ, ಕನಕಪುರ ಹಾಗೂ ಮಾಗಡಿ ತಾಲ್ಲೂಕಿನ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಾಮನಗರ ಜಿಲ್ಲೆ ಹಾಗೂ ಸಹಾಯಕ ನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ, ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲ್ಲೂಕಿನ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ರಾಮನಗರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು