Tel: 7676775624 | Mail: info@yellowandred.in

Language: EN KAN

    Follow us :


ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ

Posted date: 07 Jul, 2023

Powered by:     Yellow and Red

ರಾಮನಗರ: ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ರಾಮನಗರ ಜಿಲ್ಲೆಯ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾದ್ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಶಿಕ್ಷಕರ ಹಾಗೂ ಉಪನ್ಯಾಸಕರ ಹುದ್ದೆಗೆ ಅತಿಥಿ ಶಿಕ್ಷಕರ / ಉಪನ್ಯಾಸಕರಿಂದ ಗೌರವಧನದ ಆಧಾರದ ಮೇಲೆ ಅರ್ಜಿ ಆಹ್ವಾನಿಸಲಾಗಿದೆ.


ಅರ್ಹ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು, ಸಂಬಂಧಪಟ್ಟ ವಿಷಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಬಿಎಡ್, ಬಿಪಿಎಡ್ ಪದವಿ ಕಡ್ಡಾಯವಾಗಿರುತ್ತದೆ. ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅಥವಾ ನಿವೃತ್ತ ಶಿಕ್ಷಕರು ಅರ್ಜಿ ಸಲ್ಲಿಸಬಹುದು. ಆಸಕ್ತರು ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಜು. 15 ರೊಳಗೆ ಜಿಲ್ಲಾ ಅಧಿಕಾರಿ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, 1 ನೇ ಮಹಡಿ, ಶ್ರೀರಾಮ ಕಾಂಪ್ಲೆಕ್ಸ್, ವಿನಾಯಕನರ ಬಿ.ಎಂ. ರಾಮನಗರ ಜಿಲ್ಲೆ ಸಲ್ಲಿಸಬೇಕು.


ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಇಲಾಖಾ ಕಚೇರಿಗೆ ಭೇಟಿ ನೀಡಿ ಅಥವಾ 080-27271104 ಗೆ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ರಾಮನಗರ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑