ಡೆಂಗ್ಯೂ ರೋಗದ ಅರಿವು ಕಾರ್ಯಕ್ರಮ

ಚನ್ನಪಟ್ಟಣ : ಲಯನ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತ್ ವಿಕಾಸ ಪರಿಷತ್ತು, ಭಾರತ ಸೇವಾದಳ ಹಾಗೂ ಬಾಲು ಪಬ್ಲಿಕ್ ಸ್ಕೂಲ್ ಸಹಯೋಗದಲ್ಲಿ ಜುಲೈ 26 ರಂದು ಬಾಲು ಪಬ್ಲಿಕ್ ಶಾಲಾ ಆವರಣದಲ್ಲಿ ಮಾರಕ ಡೆಂಗ್ಯೂ ರೋಗದ ಕುರಿತು ಅರಿವು ಮೂಡಿಸುವ ಹಾಗೂ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಡೆಂಗ್ಯೂ ಬಗ್ಗೆ ಉಪನ್ಯಾಸ ನೀಡಲಿದ್ದು ಜತೆಗೆ ಶಾಲಾ ವಿದ್ಯಾರ್ಥಿಗಳಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಆಯೋಜಿಸಿರುವುದಾಗಿ ಲಯನ್ ಸಂಸ್ಥೆಯ ಕಾರ್ಯದರ್ಶಿ ವಿ.ಸಿ.ಚಂದ್ರೆಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೋ ರಾ ಶ್ರೀನಿವಾಸ...
ಮೊ:9845856139.
ಪ್ರತಿಕ್ರಿಯೆಗಳು