Tel: 7676775624 | Mail: info@yellowandred.in

Language: EN KAN

    Follow us :


ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿಕೊಳ್ಳಿ; ಸುದರ್ಶನ್

Posted date: 17 Sep, 2022

Powered by:     Yellow and Red

ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಿಕೊಳ್ಳಿ; ಸುದರ್ಶನ್

ಚನ್ನಪಟ್ಟಣ: ಸರ್ಕಾರದ ಆದೇಶದಂತೆ ಅಧಿಕಾರಿಗಳು ಸಾರ್ವಜನಿಕರಿಂದ ಗ್ರಾಮದ  ಸಮಸ್ಯೆಗಳನ್ನು  ಆಲಿಸಿ ಸ್ಥಳದಲ್ಲೇ ಪರಿಹರಿಸಲು ವಾಸ್ತವ್ಯ ಪರಿಕಲ್ಪನೆ ಜಾರಿಗೆ ತಂದಿದ್ದು ಜನರ ಮತ್ತು ಇಲಾಖೆಗಳ ನಡುವೆ ಸಮನ್ವಯ ಸಾಧಿಸುವಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಸಾಕ್ಷಿಯಾಗಲಿದೆ ಎಂದು ಚನ್ನಪಟ್ಟಣ ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಸುದರ್ಶನ್ ಅವರು ತಿಳಿಸಿದರು.


ಅವರು ಇಂದು ಚನ್ನಪಟ್ಟಣ ತಾಲೂಕಿನ ಮಳೂರು ಹೋಬಳಿಯ ಇರುಳಿಗರದೊಡ್ಡಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಪಿಂಚಣಿ, ಆಶ್ರಯ ಯೋಜನೆ, ಪೌತಿ ಖಾತೆ, ಸ್ಮಶಾನ, ಪಹಣಿ  ತಿದ್ದುಪಡಿ, ಭೂ ಒತ್ತುವರಿ ತೆರವು, ಮತದಾರರ ಪಟ್ಟಿ ಪರಿಷ್ಕರಣೆ, ಬರ, ಪ್ರವಾಹ ಪರಿಶೀಲನೆ ಹಾಗೂ ಪರಿಹಾರ ನೀಡುವುದು, ಅರ್ಹ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಹಂಚಿಕೆ, ಪೋಡಿ ಪ್ರಕರಣ ಇತ್ಯರ್ಥ, ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಗುವುದು. ಸಾರ್ವಜನಿಕರು ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.


ಇದೇ ಸಂರ್ಭದಲ್ಲಿ ಆರೋಗ್ಯ ಇಲಾಖೆ ವತಿಯಿಂದ ಉಚಿತ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು, ಅರ್ಹರಿಗೆ ಕೋವಿಡ್ ಲಸಿಕೆ ನೀಡಿ ಸಾಂಕ್ರಾಮಿಕ ರೋಗಗಳ ಬಗ್ಗೆ ಅರಿವು ಮೂಡಿಸಲಾಯಿತು.


ಕಾರ್ಯಕ್ರಮದಲ್ಲಿ ಪಿಡಿಓ ಶ್ರೀನಿವಾಸ್, ಮಾಕಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರಭಾವತಿ, ಉಪಾಧ್ಯಕ್ಷ ಬೆಟ್ಟೆಗೌಡ, ಇನ್ನಿತರೆ ತಾಲೂಕು ಮಟ್ಟದ ಅಧಿಕಾರಿಗಳು ,  ಸದಸ್ಯರುಗಳು, ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.


ಸನ್ಮಿತ್ರ ಅವರಿಂದ ಸಂಬಂಧಿತ ವೀಡಿಯೊಗಳು



ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑