Tel: 7676775624 | Mail: info@yellowandred.in

Language: EN KAN

    Follow us :


ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೇಳಿಕೆ; ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆಯ ಎಚ್ಚರಿಕೆ

Posted date: 05 Oct, 2023

Powered by:     Yellow and Red

ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಹೇಳಿಕೆ; ಅಲ್ಪಸಂಖ್ಯಾತ ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆಯ ಎಚ್ಚರಿಕೆ

ರಾಮನಗರ:ಚನ್ನಪಟ್ಟಣ: ವಸತಿ ಹಾಗೂ ವಕ್ಫ್ ಸಚಿವ ಮೇಲಾಗಿ ಮುಸ್ಲಿಂ ಸಮುದಾಯದ ರಾಜ್ಯ ಮುಖಂಡ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ತಾಲೂಕು ಅಧ್ಯಕ್ಷ ಸೈಯದ್ ಫಾಸಿಲ್ ನೀಡಿರುವ ಹೇಳಿಕೆಗೆ ಈ ಕೂಡಲೇ ಕ್ಷಮೆ ಕೇಳಬೇಕು, ಇಲ್ಲವಾದರೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ನಗರಸಭೆ ಕಾಂಗ್ರೆಸ್ ಸದಸ್ಯ ವಾಸಿಲಾಲಿಖಾನ್ ಎಚ್ಚರಿಕೆ ನೀಡಿದರು.


ನಗರದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಯನ್ನು ಸಮರ್ಥಿಸುವ ನಿಟ್ಟಿನಲ್ಲಿ, ಫಾಜಿಲ್ ಸಚಿವ ಜಮೀರ್ ಅಹ್ಮದ್ ವಿರುದ್ದ ಹಗುರವಾಗಿ ಮಾತನಾಡಿರುವುದು ಸರಿಯಿಲ್ಲ ಎಂದು ಕಿಡಿ ಕಾರಿದರು. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಕುರಿತು ಹಗುರವಾಗಿ ಮಾತನಾಡಿರುವ ಸೈಯ್ಯದ್ ಫಾಜಿಲ್ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಅವರ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.


ಈ ಹಿಂದೆ ಹೆಚ್.ಡಿ. ಕುಮಾರಸ್ವಾಮಿ ಅವರು ಮೊದಲ ಬಾರಿ ಮುಖ್ಯಮಂತ್ರಿ ಆಗಲು ಜಮೀರ್ ಅಹ್ಮದ್, ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ, ಸಚಿವ ಚಲುವರಾಯಸ್ವಾಮಿ ಮುಂತಾದವರು ಕಾರಣರಾಗಿದ್ದರು. ಅಂದು ಕುಮಾರಸ್ವಾಮಿಯನ್ನು ಬೆಂಬಲಿಸದಿದ್ದಲ್ಲಿ ಅವರು ಸಿಎಂ ಆಗುತ್ತಲೇ ಇರಲಿಲ್ಲ ಎಂದರು. ಕಾಲಕಾಲಕ್ಕೆ ಈ ತಂಡ ಕುಮಾರಸ್ವಾಮಿ ಅವರನ್ನು ಬೆಂಬಲಿಸಿದ ಕಾರಣಕ್ಕೆ ಅವರು ಬೆಳೆದರು. ಇದರ ಅರಿವಿಲ್ಲದೇ ಫಾಜಿಲ್ ಜಮೀರ್ ಅಹ್ಮದ್ ಅವರ ಕುರಿತು ಹೇಳಿಕೆ ನೀಡಿರುವುದು ಖಂಡನೀಯ ಎಂದರು.


ಆಗ ಅಟಲ್ ಬಿಹಾರಿ ವಾಜಪೇಯಿ, ಯಡಿಯೂರಪ್ಪ ಅವರಂತಹ ನಾಯಕರು ಇದ್ದರು, ಈ ಹಿಂದೆ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಕೈಜೋಡಿಸಿ ಅಧಿಕಾರ ನಡೆಸಿದಾಗ ಬಿಜೆಪಿ ಇಷ್ಟರ ಮಟ್ಟದ ಕೋಮುವಾದಿ ಪಕ್ಷವಾಗಿರಲಿಲ್ಲ. ಅಂದಿನ ನಾಯಕರು ಎಲ್ಲಾ ಸಮುದಾಯದ ಜನರನ್ನು ಒಂದಾಗಿ ಕಾಣುತ್ತಿದ್ದರು. ಆದರೆ, ಬಸವರಾಜ ಬೊಮ್ಮಾಯಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಕೋಮು ಸೌಹಾರ್ದತೆ ಹಾಳಾಯಿತು. ಇಂಥ ಹೊತ್ತಿನಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಕೈಜೋಡಿಸಿರುವುದು ನಮ್ಮ ಸಮುದಾಯಕ್ಕೆ ಬೇಸರ ತರಿಸಿದೆ ಎಂದರು.


ನಗರಸಭೆಯ ಮಾಜಿ ಸದಸ್ಯ ಭಾವಸಾ ಮಾತನಾಡಿ ಈ ಹಿಂದಿನಿಂದಲೂ ಅಲ್ಪಸಂಖ್ಯಾತ ಸಮುದಾಯ ಜೆಡಿಎಸ್ ಅನ್ನು ಬೆಂಬಲಿಸಿಕೊಂಡು ಬಂದಿತ್ತು. ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಲು, ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಮುಖ್ಯಮಂತ್ರಿಯಾಗುವಲ್ಲಿ ಮುಸ್ಲಿಂ ಸಮುದಾಯದ ಕೊಡುಗೆ ಹೆಚ್ಚಿದೆ. ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಲ್ಲಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಸೋತ ಕಾರಣಕ್ಕೆ ಕುಮಾರಸ್ವಾಮಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದಾರೆ.  ಅವರ ಈ ನಿರ್ಧಾರ ಸರಿಯೋ ತಪ್ಪೋ ಎಂಬುದನ್ನು ಮುಂದಿನ ದಿನಗಳಲ್ಲಿ ರಾಜ್ಯದ ಜನರೇ ತೀರ್ಮಾನಿಸಲಿದ್ದಾರೆ ಎಂದರು.


ನಂತರ ನಗರಸಭೆ ಸದಸ್ಯ ಲಿಯಾಕತ್ ಆಲಿಖಾನ್ ಮಾತನಾಡಿ, ಕುಮಾರಸ್ವಾಮಿಯವರಿಗೆ ರಾಮನಗರದಲ್ಲಿ ತಮ್ಮ ಮಗ ಗೆಲ್ಲಬೇಕಿತ್ತು ಅಷ್ಟೇ. ಆದರೆ ಅವರು ಸೋತರು. ಅದಕ್ಕಾಗಿ ಈಗ ಲೋಕಸಭೆ ಚುನಾವಣೆಯಲ್ಲಿ ಸಂಸದ ಡಿ.ಕೆ.ಸುರೇಶ್ ಅವರನ್ನು ಸೋಲಿಸುವ ನಿಟ್ಟಿನಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.


ಈ ಸಂದರ್ಭದಲ್ಲಿ ನಗರಸಭೆ ಸದಸ್ಯ ಮಥೀನ್ ಖಾನ್, ಸಾಬೀಲ್, ಲೋಕೇಶ್ ಮತ್ತಿತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑