Tel: 7676775624 | Mail: info@yellowandred.in

Language: EN KAN

    Follow us :


ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

Posted date: 19 Dec, 2023

Powered by:     Yellow and Red

ಜಿಲ್ಲೆಯಲ್ಲಿ ಮೊದಲ ಕೊರೊನಾ ಪತ್ತೆ

ರಾಮನಗರ ಜಿಲ್ಲೆಯಲ್ಲಿ ಕಳೆದ ಏಳು ತಿಂಗಳ ನಂತರ ಇದೇ ಮೊದಲ ಬಾರಿಗೆ ಕೊರೋನಾ ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬಿಡದಿ ಬಳಿಯ ಬೈರಮಂಗಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ‌ ತಪಾಸಣೆಗೆ ಬಂದ ಯುವಕನಲ್ಲಿ ಸೋಂಕು ಪತ್ತೆಯಾಗಿರುವುದನ್ನು ಜಿಲ್ಲಾ ಆರೋಗ್ಯ ಅಧಿಕಾರಿ ದೃಢಪಡಿಸಿದ್ದಾರೆ


 ೬೦ ವರ್ಷದ ಮೇಲ್ಪಟ್ಟರವರೆಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವರು ಫರ್ಮಾನು ಹೊರಡಿಸಿದ್ದಾರೆ. ಆದರೆ,  ೨೨ ವರ್ಷದ ಯುವಕನಲ್ಲಿ ಸೋಂಕು ಪತ್ತೆಯಾಗಿದ್ದು, ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಸೃಷ್ಟಿಸಿದೆ. ತಿಮ್ಮೆಗೌಡನದೊಡ್ಡಿ ಗ್ರಾಮದ ಬಳಿ ಇರುವ ಅಮೃತ್ ಕಾಲೇಜಿನಲ್ಲಿ ಈತ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದಾನೆ. ಈತನಿಗೆ ಜ್ವರ ಕೆಮ್ಮು ಹಾಗೂ ಶೀತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೈರಮಂಗಲ ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಬಂದಿದ್ದಾಗ ಸೋಂಕು ದೃಢಪಟ್ಟಿರುವುದಾಗಿ ಡಿಹೆಚ್ಓ ಮಾಹಿತಿ ನೀಡಿದ್ದಾರೆ. 


ಚಿಕಿತ್ಸೆಗಾಗಿ ಬಂದ ಯುವಕನಿಗೆ ಆಸ್ಪತ್ರೆಯ ಸಿಬ್ಬಂದಿ ರ್ಯಾಂಡಮ್ ಪರೀಕ್ಷೆ ( random test) ಮಾಡಲಾಗಿ ಪಾಸಿಟಿವ್ ವರದಿ ಬಂದಿದೆ. ಇದರಿಂದಾಗಿ ಕೊರೋನಾ ಸೋಂಕು ಧೃಡವಾಗುತ್ತಿದಂತೆ ತಮ್ಮ ಮೇಲಾಧಿಕಾರಿಗಳ ಗಮನಕ್ಕೆ ತಂದು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಲಾಗಿದೆ. ಆಂಬುಲೆನ್ಸ್ ಮೂಲಕ ಸೋಂಕಿತನನ್ನು ಜಿಲ್ಲಾ ಆಸ್ಪತ್ರೆಗೆ ಕರೆ ತಂದು ಎರಡು ದಿನಗಳವರೆಗೆ ಐಸೋಲೇಶನ್ ಮಾಡಲಾಗಿದೆ. 


*ಹಾಸ್ಟೆಲ್ ನಲ್ಲಿ ವಿದ್ಯಾಭ್ಯಾಸ:*

ತಿಮ್ಮೆಗೌಡನದೊಡ್ಡಿ ಬಳಿ ಇರುವ ಪ್ರತಿಷ್ಠಿತ ಅಮೃತ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿಇ ವ್ಯಾಸಂಗ ಮಾಡುತ್ತಿದ್ದ ಈತ ಮೂಲತಃ ಮಂಡ್ಯ ಜಿಲ್ಲೆಯವನಾಗಿದ್ದು ಕಾಲೇಜಿನಲ್ಲಿರುವ ಹಾಸ್ಟೆಲ್ ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ. ಸೋಂಕಿತನ ಜೊತೆಗೆ ಹಾಸ್ಟೆಲ್ ನಲ್ಲಿ ಇತರೆ ವಿದ್ಯಾರ್ಥಿಗಳು ಸಂಪರ್ಕದಲ್ಲಿ ಇರುವ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. 


*ನಮ್ಮ ಪಕ್ಕದ ರಾಜ್ಯ ಕೇರಳದಲ್ಲಿ ಕೊರೋನಾ ಸೋಂಕಿತ ಪ್ರಕರಣಗಳು ಕಾಣಿಸಿಕೊಂಡಿವೆ. ಈ ಹಿನ್ನೆಲೆಯಲ್ಲಿ ನಮ್ಮ ಜಿಲ್ಲೆಯಲ್ಲು ಕೂಡ ಎಚ್ಚರಿಕೆ ವಹಿಸಲಾಗಿದೆ. ಇದೀಗ ಒಂದು ಸೋಂಕಿತ ಪ್ರಕರಣ ಪತ್ತೆಯಾಗಿದೆ. ಸೋಂಕಿತನಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಐಸೋಲೇಶನ್ ಮಾಡಲಾಗಿದ್ದು ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಈಗಾಗಲೇ ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸೋಂಕು ಪತ್ತೆಯ ಟೆಸ್ಟಿಂಗ್ ಹೆಚ್ಚು ಮಾಡಲಾಗಿದೆ. ಸಾರ್ವಜನಿಕರು ಹೆಚ್ಚಿನ ಆತಂಕ ಪಡುವುದು ಬೇಡ ಮಾಸ್ಕ್ ಬಳಕೆ ಮಾಡಿ ಸಮಾಜಿಕ ಅಂತತ ಕಾಪಾಡಿಕೊಳ್ಳಿ.*


*ಡಾ.ನಿರಂಜನ್, ಜಿಲ್ಲಾ ವೈದ್ಯಾಧಿಕಾರಿ*


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑