Tel: 7676775624 | Mail: info@yellowandred.in

Language: EN KAN

    Follow us :


ನಾಳೆಯಿಂದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ ಜಾತ್ರಾ/ಬ್ರಹ್ಮರಥೋತ್ಸವ: ಶಿವಾನಂದ ಮೂರ್ತಿ

Posted date: 09 Jan, 2024

Powered by:     Yellow and Red

ನಾಳೆಯಿಂದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ ಜಾತ್ರಾ/ಬ್ರಹ್ಮರಥೋತ್ಸವ: ಶಿವಾನಂದ ಮೂರ್ತಿ

ರಾಮನಗರ:  ಚನ್ನಪಟ್ಟಣ ತಾಲ್ಲೂಕು ವಂದಾರಗುಪ್ಪೆ ಗ್ರಾಮದ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ 2024ನೇ ಸಾಲಿನ ಜಾತ್ರಾ/ಬ್ರಹ್ಮರಥೋತ್ಸವವು ಜ. 12 ರಿಂದ ಪ್ರಾರಂಭವಾಗಿ ಜ. 22 ವರೆಗೆ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ ಅವರು ತಿಳಿಸಿದರು.


ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.


ಜ. 19ರ ಶುಕ್ರವಾರ ಶ್ರೀ ಕೆಂಗಲ್ ಆಂಜನೇಯಸ್ವಾಮಿಯವರ ಬ್ರಹ್ಮರಥೋತ್ಸವ ಜರುಗಲಿದೆ. ಜಾತ್ರಾ ಸಂದರ್ಭದಲ್ಲಿ ವಿದ್ಯುತ್‌ನಲ್ಲಿ ಯಾವುದೇ ಆಡಚಣೆಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಕೈಗೊಳ್ಳಬೇಕು ಹಾಗೂ ಯಾವುದೇ ಅವಘಡ ಸಂಭವಿಸದಂತೆ ಅಗ್ನಿಶಾಮಕ ದಳ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.


ಜಾತ್ರಾ/ಬ್ರಹ್ಮರಥೋತ್ಸವ ಸಂದರ್ಭದಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ವಿದ್ಯುತ್ ದೀಪಾಲಂಕಾರ ಮಾಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಆರೋಗ್ಯ ಇಲಾಖೆ ವತಿಯಿಂದ ಅಂಬ್ಯುಲೆನ್ಸ್ ವ್ಯವಸ್ಥೆ ಮತ್ತು ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಬೇಕು ಹಾಗೂ ರಾಸುಗಳಿಗೆ ಚಿಕಿತ್ಸೆ ನೀಡಲು ಪಶುಪಾಲನಾ ಇಲಾಖೆ ವತಿಯಿಂದ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಬೇಕು ಎಂದು ತಿಳಿಸಿದರು.


ಜಾತ್ರಾ/ಬ್ರಹ್ಮರಥೋತ್ಸವ ಸಂದರ್ಭದಲ್ಲಿ ಜಾನುವಾರು ಜಾತ್ರೆ ನಡೆಯುವುದರಿಂದ ಅತಿಹೆಚ್ಚು ಸಂಖ್ಯೆಯಲ್ಲಿ ರೈತರು ಭಾಗವಹಿಸುವುದರಿಂದ ತೋಟಗಾರಿಕೆ, ಕೃಷಿ, ರೇಷ್ಮೆ ಇಲಾಖೆ ವತಿಯಿಂದ ರೈತರಿಗೆ ಸಿಗುವ ಸೌಲಭ್ಯಗಳ ಕುರಿತು ಅರಿವು ಮೂಡಿಸಲು ಸ್ಟಾಲ್‌ಗಳನ್ನು ತೆರೆಯಬೇಕು ಹಾಗೂ ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನೆರವೇರಿಸಬೇಕು ಎಂದರು.


ಸಭೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಘು ಎಚ್.ಕೆ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑