Tel: 7676775624 | Mail: info@yellowandred.in

Language: EN KAN

    Follow us :


ಕಲೆಯನ್ನು ಆಸ್ವಾಧಿಸುವ ಮನಸ್ಥಿತಿ ಮಕ್ಕಳಿಗೆ ಇರಬೇಕು, ಕಾಳರಾಜೇಗೌಡ

Posted date: 13 Jan, 2024

Powered by:     Yellow and Red

ಕಲೆಯನ್ನು ಆಸ್ವಾಧಿಸುವ ಮನಸ್ಥಿತಿ ಮಕ್ಕಳಿಗೆ ಇರಬೇಕು, ಕಾಳರಾಜೇಗೌಡ

ರಾಮನಗರ/ಚನ್ನಪಟ್ಟಣ: ಕಲೆಯನ್ನು ಆರಾಧಿಸಿ ಆಸ್ವಾಧಿಸುವ ಮನಸ್ಥಿತಿ ವಿದ್ಯಾರ್ಥಿಗಳಿಗೆ ಬಾಲ್ಯದಿಂದಲೇ ಬರುವುದು ಬಹಳ ಮುಖ್ಯ. ಓದಿನ ಜೊತೆಯಲ್ಲಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಬೆಳೆಸುವ ಉದ್ದೇಶದಿಂದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಚನ್ನಪಟ್ಟಣ ತಾಲ್ಲೂಕಿನ ಹಾರೋಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರಾದ ಕಾಳರಾಜೇಗೌಡ ಅವರು ತಿಳಿಸಿದರು.


ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಹಾಗೂ ಹಾರೋಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಚನ್ನಪಟ್ಟಣ ತಾಲ್ಲೂಕಿನ ಹಾರೋಕೊಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ವಿದ್ಯಾರ್ಥಿಗಳು ಪ್ರತಿಭೆಗಳಲ್ಲಿ ಮುಂದಿರಬೇಕು. ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿಕೊಂಡು ತಮ್ಮ ಗುರುಗಳಿಗೆ ಹಾಗೂ ಶಾಲೆಗೆ ಹೆಸರು ತಂದುಕೊಡಬೇಕು. ಜನಪದ ಕಲೆಗಳನ್ನು ಮುಂದಿನ ಪೀಳಿಗೆಯವರೆಗೆ ಉಳಿಸಿ-ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.


ಕಾರ್ಯಕ್ರಮದಲ್ಲಿ ಹಾರೋಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ರತ್ನಮ್ಮ ಶಿವಲಿಂಗಯ್ಯ, ಸದಸ್ಯರಾದ ಮಹೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರಮೇಶ್ ಬಾಬು, ಹಾರೋಕೊಪ್ಪ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.

ಹಲವಾರು ಕಲಾತಂಡಗಳು ಭಾಗವಹಿಸಿದ್ದವು. ವಿದ್ಯಾರ್ಥಿಗಳು ವೇಷಭೂಷಣಗಳೊಂದಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑