Tel: 7676775624 | Mail: info@yellowandred.in

Language: EN KAN

    Follow us :


ಫೆ.16ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ

Posted date: 17 Jan, 2024

Powered by:     Yellow and Red

ಫೆ.16ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಉಪ ಚುನಾವಣೆ

ರಾಮನಗರ, ಜ. 17:ರಾಜ್ಯ ವಿಧಾನ ಪರಿಷತ್ತಿಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿದ್ದ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗವು ಉಪ ಚುನಾವಣೆಗೆ ಅಧಿಸೂಚನೆ ಹೊರಡಿಸಿದೆ.


ಮಾದರಿ ನೀತಿ ಸಂಹಿತೆ ಇದೇ ಜ. 16 ರಿಂದ ಜಾರಿಗೊಂಡಿದ್ದು, 2024ರ ಜ. 23ರಂದು ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ. ಜ. 30ಕ್ಕೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದ್ದು, ಜ. 31 ನಾಮಪತ್ರಗಳ ಪರಿಶೀಲನೆ, 2024ರ ಫೆಬ್ರವರಿ 2ರಂದು ನಾಮಪತ್ರಗಳ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಫೆ. 16ರ ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಚುನಾವಣಾ ಮತದಾನ ನಡೆಯಲಿದೆ. ಫೆ. 20ರಂದು ಮತ ಎಣಿಕೆ ನಡೆಯಲಿದೆ. ಫೆ. 23ಕ್ಕೆ ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑