Tel: 7676775624 | Mail: info@yellowandred.in

Language: EN KAN

    Follow us :


ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ

Posted date: 23 Jan, 2024

Powered by:     Yellow and Red

ದಿವ್ಯಚೇತನ ಇಂಗ್ಲಿಷ್ ಶಾಲೆಯಲ್ಲಿ ಮೇಳೈಸಿದ ಮಿನಿ ವಿಜ್ಞಾನ ಮೇಳ

ಚನ್ನಪಟ್ಟಣ: ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ ಬ್ರಾಡ್ಕಾಂ ವಿಜ್ಞಾನ ಕೇಂದ್ರ ಚನ್ನಪಟ್ಟಣ ಇವರ ವತಿಯಿಂದ ನಗರದ ದಿವ್ಯ ಚೇತನ ಇಂಗ್ಲಿಷ್ ಪ್ರೌಢಶಾಲೆಯಲ್ಲಿ ಮಿನಿ ವಿಜ್ಞಾನ ಮೇಳ ವನ್ನು ಆಯೋಜಿಸಲಾಗಿತ್ತು. 


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಎಲ್. ವರದರಾಜು ರವರು ವಹಿಸಿದ್ದರು. ಇದೇ ವೇಳೆ ಮಾತನಾಡಿದ ಅವರು ವಿಜ್ಞಾನದ ಮಕ್ಕಳಿಗೆ ಶಿಕ್ಷಕರು ಮೇಳ ಆಯೋಜನೆ ಮಾಡಿರುವುದು ಶ್ಲಾಘನೀಯ ಎಂದರು. ಮಕ್ಕಳು ಇದರಿಂದ ಮತ್ತಷ್ಟು ಜ್ಞಾನ ಬಳಸಿಕೊಂಡು ಓದಿನಲ್ಲಿ ಚುರುಕಾಗಲು ಹಾಗೂ ಕಲಿಯುವ ಉತ್ಸಾಹವನ್ನು ತೋರಲು ಇಂತಹ ವಿಜ್ಞಾನ ಮೇಳಗಳು ನಡೆಯುತ್ತಾ ಇರಬೇಕು ಎಂದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ಶಿಕ್ಷಣ ಸಂಯೋಜಕ ಯೋಗೇಶ್ ಚೆಕ್ಕೆರೆ, ಗಂಗಾಧರ ಮೂರ್ತಿ, ಟೌನ್ ಮ ಸಿಆರ್‌ಪಿ ರವಿಕುಮಾರ್, ಟ್ರಸ್ಟಿಗಳಾದ ರಮೇಶ್ ಬಿಜಿ ರವರು ಭಾಗವಹಿಸಿದ್ದರು.


 ಕಾರ್ಯಕ್ರಮದಲ್ಲಿ ಸ್ವಾಗತ ಮತ್ತು ನಿರೂಪಣೆಯನ್ನು ಅಗಸ್ತ್ಯ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಮನು ಎನ್ ರವರು ನಡೆಸಿದರು.


ಪ್ರದೀಪ್ ಕುಮಾರ್ ಅವರು ಕಾರ್ಯಕ್ರಮದಲ್ಲಿ ವಂದಿಸಿದರು. ಕಾರ್ಯಕ್ರಮದಲ್ಲಿ  ಶಾಲೆಯ ಮುಖ್ಯ ಶಿಕ್ಷಕರಾದ ಕಿರಣ್ ಕುಮಾರ್ ರವರು ಮತ್ತು ವಿಜ್ಞಾನ ಶಿಕ್ಷಕರಾದ ಸುನಿಲ್ ಮತ್ತು ಗೀತಾ ರವರು ಹಾಜರಿದ್ದರು. ಅಕ್ಕಪಕ್ಕದ ಶಾಲೆಯ ಮಕ್ಕಳು ಭೇಟಿ ನೀಡಿ ಕಾರ್ಯಕ್ರಮವನ್ನು ಯಶಸ್ವಿ ಗಳಿಸಿದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑