Tel: 7676775624 | Mail: info@yellowandred.in

Language: EN KAN

    Follow us :


ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

Posted date: 02 Feb, 2024

Powered by:     Yellow and Red

ನಗರ ಸಿಪಿಐ ವರ್ಗಾವಣೆ, ನೂತನ ಸಿಪಿಐ ರವಿಕಿರಣ್

  ಚನ್ನಪಟ್ಟಣ,ಫೆ:೧-ಲೋಕಸಭಾ ಚುನಾವಣೆಯ ಹೊಸ್ತಿಲಲ್ಲೇ ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆ  ಪರ್ವ ಪ್ರಾರಂಭವಾಗಿದ್ದು, ಅದಕ್ಕೆ ಪೂರಕ ವೆಂಬಂತ್ತೆ ನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಸಿ.ಪಿ.ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶೋಭಾರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ನೀಡಿದೆ.


ಕಳೆದ ಒಂದೂವರೆ ವರ್ಷಗಳು ನಗರವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಅವರಿಂದ ತೆರವಾದ ಸ್ಥಾನಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು ಮೂಲದ ರವಿಕಿರಣ್ ಎಂಬುವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಸದ್ಯದ ಪರಿಸ್ಥಿತಿಯಲ್ಲಿ ವರ್ಗಾವಣೆಗೊಂಡ ಶೋಭಾರವನ್ನು ಡಿಜಿ ಆಫೀಸ್‌ಗೆ ನಿಯೋಜಿಸಲಾಗಿದೆ.


*ನೂತನ ಪಿಎಸ್ಐ ಅಗಿ ರವಿಕಿರಣ್*

ಶ್ರೀರಂಗಪಟ್ಟಣ, ರಾಮನಗರ, ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿರುವ ರವಿಕಿರಣ್ ಎಂ ಎ ರವರು ಚನ್ನಪಟ್ಟಣ ನಗರ ವೃತ್ತ ನಿರೀಕ್ಷಕರಾಗಿ ಸೇವೆ ಸಲ್ಲಿಸಿದ್ದು ಈಗಾಗಲೇ ಚನ್ನಪಟ್ಟಣ ನಗರ ವೃತ್ತ ನಿರೀಕ್ಷಕರಾಗಿ ನಿಯೋಜನೆಗೊಂಡಿದ್ದಾರೆ.


ಒಂದು ವರ್ಷದ ಮೇಲೆ ಒಂದು ತಿಂಗಳು ಸೇವೆ ಮಾಡಿರುವ ಡಿ.ವೈ.ಎಸ್.ಪಿ.ಸಿ.ಪಿ.ಐ ಹಾಗೂ ಪಿ.ಎಸ್.ಐಗಳು ಹಾಗೂ ಒಂದೇ ಜಿಲ್ಲೆಯವರಾಗಿರುವವರನ್ನು ಕೂಡ ಕೆಲವೇ ದಿನಗಳಲ್ಲಿ ವರ್ಗಾವಣೆ ಮಾಡಲಾಗುತ್ತಿರುವುದಾಗಿ ಬಲ್ಲ ಮೂಲಗಳು ತಿಳಿಸಿವೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑