Tel: 7676775624 | Mail: info@yellowandred.in

Language: EN KAN

    Follow us :


ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

Posted date: 02 Feb, 2024

Powered by:     Yellow and Red

ಸರ್ವರ ಬಾಳಿಗೂ ಸಂವಿಧಾನವೇ ಮೂಲ, ನ್ಯಾಯಾಧೀಶೆ ಶುಭಾ

ಚನ್ನಪಟ್ಟಣ: ಭಾರತದ ಪ್ರತಿಯೊಬ್ಬ ಪ್ರಜೆಯ ಹಕ್ಕುಗಳ ಮೂಲ ಸಂವಿಧಾನವೇ ಆಗಿದೆ, ಪ್ರತಿಯೊಬ್ಬರಿಗೂ ಸಂವಿಧಾನವೇ ಉಸಿರಾಗಬೇಕು ಎಂದು ನಗರದ ನ್ಯಾಯಾಲಯದ ಆವರಣಕ್ಕೆ ಆಗಮಿಸಿದ

"ಸಂವಿಧಾನ ಜಾಗೃತಿ ಜಾಥಾ ರಥ" ಸ್ವಾಗತಿಸಿ 

ಹಿರಿಯ ಸಿವಿಲ್ ನ್ಯಾಯಾಧೀಶರಾದ 

ಶುಭಾ ಮಾತನಾಡಿದರು.


ಸಂವಿಧಾನದ ಧ್ಯೇಯದಲ್ಲಿ ನಾವು ಬದುಕುತ್ತಿದ್ದು, ಅದರ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಂವಿಧಾನ ಜಾಗೃತಿ ಜಾಥಾ ರಥವು ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಚರಿಸಿ ನ್ಯಾಯಾಲಯ ಆವರಣಕ್ಕೂ ಆಗಮಿಸಿ, ಕಕ್ಷಿದಾರರಿಗೂ ಸಂವಿಧಾನದ ತಿಳುವಳಿಕೆ ಮೂಡಿಸುತ್ತಿರುವುದು ಅರ್ಥಪೂರ್ಣವಾಗಿದೆ  

ಎಂದು ಅವರು ಅಭಿಪ್ರಾಯಪಟ್ಟರು.


ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರ ಭಾರತ. ಅನೇಕ ದೇಶಗಳ ಸಂವಿಧಾನವನ್ನು ಅಧ್ಯಯನ ನಡೆಸಿ, ದೇಶಕ್ಕೆ ಹೊಂದುವಂತೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನವನ್ನು ಅರಿತುಕೊಳ್ಳುವುದರಿಂದ ದೇಶಕ್ಕೆ ಮಾತ್ರವಲ್ಲ, ಸರ್ವರಿಗೂ ಒಳಿತಾಗುತ್ತದೆ ಎಂದು 

ಸಲಹೆ ನೀಡಿದರು.


ಪ್ರಧಾನ ಕಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಮಹೇಂದ್ರ ಅವರು ಮಾತನಾಡಿ,

ಸಂವಿಧಾನವು ನಮ್ಮ ದೇಶದ ಸರ್ವೊಚ್ಛ ಕಾನೂನಾಗಿದ್ದು, ಇದರ ಅಡಿಯಲ್ಲಿ ಇತರೆ ಎಲ್ಲಾ ಕಾನೂನುಗಳು ಬರುತ್ತವೆ. ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ. 

ಇದನ್ನು ಪ್ರತಿಯೊಬ್ಬರು ಅರಿತುಕೊಳ್ಳುವುದು ಒಳಿತು ಎಂದರು.


ಚನ್ನಪಟ್ಟಣ ವಕೀಲರ ಸಂಘದ ಅಧ್ಯಕ್ಷ ಟಿ.ವಿ.ಗಿರೀಶ್ ಮಾತನಾಡಿ, ಸಂವಿಧಾನದ ಅಡಿಯಲ್ಲಿ ನೀಡಿರುವ ಹಕ್ಕು ಮತ್ತು ಕರ್ತವ್ಯಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ.

ಯುವ ಪೀಳಿಗೆ ಸಂವಿಧಾನದ ಬಗ್ಗೆ ಜ್ಞಾನ ಹೊಂದುವುದು ಅತ್ಯವಶ್ಯಕ ಎಂದು ಕಿವಿಮಾತು ಹೇಳಿದರು.


ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಶಿವಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎನ್.ಮರೀಗೌಡ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎನ್.ಸರೋಜಮ್ಮ, ಮಂಜು, 

 ವಕೀಲರ ಸಂಘದ ಉಪಾಧ್ಯಕ್ಷ ಎಸ್.ಬಿ.ಧನಂಜಯ,

ಕಾರ್ಯದರ್ಶಿ ಟಿ.ದೇವರಾಜು, ಜಂಟಿ ಕಾರ್ಯದರ್ಶಿ ಕೃಷ್ಣಪ್ಪ ಹಾಗೂ ಪದಾಧಿಕಾರಿಗಳು, ವಕೀಲರಾದ ಧರ್ಮೇಂದ್ರ ಕುಮಾರ್, ಎಚ್.ಎಸ್.ಹರೀಶ್ ಸೇರಿದಂತೆ ಎಲ್ಲಾ ವಕೀಲರು, ಮಹಿಳಾ ವಕೀಲರು, ಕೋರ್ಟ್ ಸಿಬ್ಬಂದಿ, ಕಕ್ಷಿದಾರರು ಭಾಗವಹಿಸಿದ್ದರು.


ಗೋ ರಾ ಶ್ರೀನಿವಾಸ...

ಮೊ:9945856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑