Tel: 7676775624 | Mail: info@yellowandred.in

Language: EN KAN

    Follow us :


ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

Posted date: 09 Feb, 2024

Powered by:     Yellow and Red

ಶಿಕ್ಷಣ ಪಡೆದರೆ ಜೀತ ಪದ್ಧತಿ ಅಳಿಸಲು ಸಾಧ್ಯ : ನ್ಯಾಯಾಧೀಶೆ ಅನಿತಾ ಎನ್. ಪಿ.

ರಾಮನಗರ: ಉದ್ದೇಶ ಪೂರ್ವಕವಾಗಿ ಹಾಗೂ ವ್ಯಕ್ತಿಯೋರ್ವರನ್ನು ತಮ್ಮ ಅವಶ್ಯಕತೆಗನುಗುಣವಾಗಿ ಬಳಸಿಕೊಳ್ಳಲು ಸಾಲ ಕೊಡುವುದು ಅಥವಾ ಜೀತದಾಳಾಗಿ ದುಡಿಮೆ ಮಾಡಲು ಇರಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ ಇಂತಹ ಅಪರಾಧಗಳಿಗೆ ಕಾನೂನಿನ ಕಾಯ್ದೆಯಡಿ ಮೂರು ವರ್ಷ ಕಾರ ಗೃಹ ವಾಸ ಮತ್ತು ದಂಡವನ್ನು ವಿಧಿಸಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ ಅವರು ತಿಳಿಸಿದರು. ಅವರು ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಜೀತದಾಳುಗಳು ತಾನು ಆರ್ಥಿಕ ಹಾಗೂ ಇತರೆ ಸಂಕಷ್ಟಗಳಲ್ಲಿ ಪಡೆದಂತಹ ಅಲ್ಪಪ್ರಮಾಣದ ಸಾಲ ಹಾಗೂ ಅದರ ಬಡ್ಡಿ ತೀರಿಸಲು ಜೀವನ ಪೂರ್ತಿ ದುಡಿಮೆ ಮಾಡಬೇಕಾಗುತ್ತದೆ. ಹಲವು ಪ್ರಕರಣಗಳಲ್ಲಿ ತನ್ನ ಕುಟುಂಬವನ್ನು ಸಹ ಜೀತಕ್ಕೆ ಮುಡಿಪಾಗಿಡಬೇಕಾಗಿರುತ್ತದೆ. ಆದ್ದರಿಂದ ಜೀತಪದ್ಧತಿಯನ್ನು ಹೋಗಲಾಡಿಸಲು ಮಕ್ಕಳಿಗೆ ಶಿಕ್ಷಣ ಮುಖ್ಯವಾಗಿರುತ್ತದೆ. ಪ್ರತಿಯೊಂದು ಕುಟುಂಬದಲ್ಲಿ ಹಿರಿಯರೆನಿಸಿಕೊಂಡವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಆಗ ತಮ್ಮ ಸ್ವಂತ ದುಡಿಮೆಯಲ್ಲಿ ಬದುಕಲು ಅವರು ಕಲಿಯುತ್ತಾರೆ. ಇದೇ ರೀತಿ ಜಿಲ್ಲೆಯಲ್ಲಿ ಜೀತದ ಆಳುಗಳಾಗಿದ್ದ 43 ಜನರನ್ನು ಜೀತಪದ್ಧತಿಯಿಂದ ಬಿಡುಗಡೆಗೊಳಿಸಿ, ಜೀತ ವಿಮುಕ್ತರನ್ನಾಗಿಸಲಾಗಿದೆ ಎಂದು ಮಾಹಿತಿ ನೀಡಿದರು. 


*ಗ್ರಾಮ ಮಟ್ಟದಲ್ಲಿ ಕಾರ್ಯಪಡೆಗಳ ರಚನೆ:*

ಮಕ್ಕಳು ಮತ್ತು ಮಾನವ ಕಾಣೆಯಾದ ಪ್ರಕರಣಗಳನ್ನು ಪತ್ತೆಹಚ್ಚಲು ಗ್ರಾಮ ಮಟ್ಟದಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಈ ಸಮಿತಿಯು ಕಾರ್ಯ ಪ್ರವೃತಿಯಾದಲ್ಲಿ  ಮಕ್ಕಳು ಮತ್ತು ಮಾನವನ ಕಳ್ಳ ಸಾಗಾಣೆ ಮಾಡುವುದನ್ನು ಹಾಗೂ ಜೀತಪದ್ದತಿಯನ್ನು ತಡೆಯಬಹುದು.  ಈ ಸಮಿತಿಯೊಂದಿಗೆ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಹಾಗೂ ಶಿಕ್ಷಕರು ಸಹ ಕೈಜೋಡಿಸಬೇಕು ಎಂದರು.

ಜೀತಪದ್ದತಿಯಿಂದ ಮುಕ್ತಿ ಹೊಂದಿದರವರಿಗೆ ಆಪ್ತ ಸಮಾಲೋಚನೆ ಮೂಲಕ, ಕೌಶಲ್ಯ ತರಬೇತಿ, ವಿದ್ಯಾಭ್ಯಾಸ, ವಸತಿ, ಉದ್ಯೋಗ ಹಾಗೂ ಬ್ಯಾಂಕ್ ಗಳಲ್ಲಿ ಸಾಲ  ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಡರನ್ನಾಗಿಬಹುದು ಎಂದರು.


*ಟಾಸ್ಕ್ ಪೋರ್ಸ್ ಸಮಿತಿ ರಚನೆ:*

ಜಿಲ್ಲಾ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ನ್ಯಾಯಾಧೀಶರು ಅಧ್ಯಕ್ಷರಾಗಿರುತ್ತಾರೆ, ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಈ ಸಮಿತಿಯು ಜೀತಪದ್ಧತಿ ಕುರಿತು ಬರುವ ದೂರುಗಳನ್ನು ಪರಿಶೀಲಿಸಿ, ಜೀತಪದ್ಧತಿ ಕುರಿತು ಕ್ರಮಕೈಗೊಳ್ಳುತ್ತಾರೆ ಎಂದು ತಿಳಿಸಿದರು.



ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಮಾತನಾಡಿ, ಪ್ರತಿಯೊಬ್ಬರಿಗೂ ಜೀತ ಪದ್ಧತಿಯ ಕುರಿತು ಅರಿವು ಮೂಡಿಸಿದಾಗ ಮಾತ್ರ ಜೀತಪದ್ಧತಿ ಹೋಗಲಾಡಿಸಲು ಸಾಧ್ಯ. ಸಾಲ ಪಡೆದವರು ಹಾಗೂ ಉದ್ಯೋಗ ರಹಿತರು ಜೀತಪದ್ಧತಿಗೆ ಒಳಗಾಗುತ್ತಾರೆ. ಇದನ್ನು ತಡೆಗಟ್ಟಬೇಕಾದರೆ ಶಿಕ್ಷಣ ಅತಿಮುಖ್ಯ ಎಂದು ತಿಳಿಸಿದರು. ಜೀತಪದ್ಧತಿ ನಿರ್ಮೂಲನೆ ಮಾಡಲು ತರಬೇತಿಗಳನ್ನು ನೀಡಿ ಉದ್ಯೋಗಗಳನ್ನು ನೀಡಿದಾಗ ಮಾತ್ರ ಜೀತ ಪದ್ಧತಿ ನಿರ್ಮೂಲನೆ ಮಾಡಬಹುದು. ಇತ್ತೀಚಿತ ತಂತ್ರಜ್ಞಾನಗಳನ್ನು ಬಳಸಿಕೊಂಡು ಜೀತಪದ್ಧತಿಯನ್ನು ಪತ್ತೆ ಹಚ್ಚಬಹುದು ಎಂದು ಇದೇ ಸಂದರ್ಭದಲ್ಲಿ  ತಿಳಿಸಿದರು.


ಇದೇ ಸಂದರ್ಭದಲ್ಲಿ ಸಭೆಯಲ್ಲಿ ಭಾಗವಹಿಸಿದವರಿಗೆ ಜೀತಪದ್ಧತಿ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಅನಿತಾ ಎನ್.ಪಿ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.

ಜೀತ ಪದ್ದತಿ ನಿರ್ಮೂಲನೆ ಕುರಿತು ಅರಿವು ಮೂಡಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಿಂದ ಜಿಲ್ಲಾ ಪಂಚಾಯತ್‌ವರೆಗೆ ಆಯೋಜಿಸಲಾಗಿದ್ದ ಜಾಥಾಕ್ಕೆ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಚಾಲನೆ ನೀಡಿದರು.


ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಚಿಕ್ಕ ಸುಬ್ಬಯ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.


ಗೊ. ರಾ. ಶ್ರೀನಿವಾಸ

ಮೊ. ನಂ - 9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑