Tel: 7676775624 | Mail: info@yellowandred.in

Language: EN KAN

    Follow us :


ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಮನೋಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು ಜಿಲ್ಲಾಧಿಕಾರಿ.

Posted date: 16 Nov, 2022

Powered by:     Yellow and Red

ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ಮನೋಸ್ಥೈರ್ಯ ಹೆಚ್ಚಿಸಿಕೊಳ್ಳಬೇಕು ಜಿಲ್ಲಾಧಿಕಾರಿ.

ಚನ್ನಪಟ್ಟಣ: ಕ್ರೀಡೆಗಳಲ್ಲಿ ಭಾಗವಹಿಸುವುದು ಕೇವಲ ಗೆಲುವಿಗಲ್ಲ. ಇದರಿಂದ ಮನೋಸ್ಥರ್ಯ ಹೆಚ್ಚಿಸಿಕೊಳ್ಳಬಹುದು.

ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯವೇ ಹೊರತು ಸೋಲು ಗೆಲುವಲ್ಲ. ಸೋಲು,ಗೆಲುವನ್ನು ಕ್ರೀಡಾಸ್ಫೂರ್ತಿಯಿಂದ ಸ್ವೀಕರಿಸುವ ಮನೋಭಾವ ಮುಖ್ಯ ಎಂದು ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಅಭಿಪ್ರಾಯಪಟ್ಟರು.


ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಆಯೋಜಿಸಿದ್ದ ಜಿಲ್ಲಾ ಪೊಲೀಸರ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಅವರು, ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ನಮ್ಮ ದೇಹಕ್ಕೆ ಹೊಸ ಚೈತನ್ಯ ಮೂಡವ ಜತೆಗೆ ಮನಸ್ಸು ಉಲ್ಲಾಸಿತವಾಗುತ್ತದೆ. ಆದ್ದರಿಂದ ಕ್ರೀಡೆಗಳಲ್ಲಿ ಭಾಗಯಾಗಿ ದೈಹಿಕವಾಗಿ ಸದೃಡವಾಗಿ ಎಂದು ಸಲಹೆ ನೀಡಿದರು.


ಪ್ರತಿನಿತ್ಯ ಒತ್ತಡದಲ್ಲೇ ಕಾರ್ಯನಿರ್ವಹಿಸುವ ಪೊಲೀಸರಿಗೆ ಖಾಸಗಿ ಬದುಕೆಂಬುದೇ ಇಲ್ಲದಂತಾಗಿದೆ. ಆದ್ದರಿಂದ ಇಂದು ದೊರಕಿರುವ ಈ ಅವಕಾಶವನ್ನು ಬಳಸಿಕೊಂಡು ನಿಮಗಿಷ್ಟವಾದ ಕ್ರೀಡೆಗಳಲ್ಲಿ ಭಾಗಿಯಾಗಿ. ಪೊಲೀಸರು ಕೇವಲ ಒಂದು ದಿನ ಮಾತ್ರ ಕ್ರೀಡೆಗಳಲ್ಲಿ ಮರೆತರೆ ಆಗುವುದಿಲ್ಲ. ಪ್ರತಿನಿತ್ಯ ಕ್ರೀಡೆ, ವ್ಯಾಯಾಮಗಳಲ್ಲಿ ಭಾಗಿಯಾಗಿ ದೇಹ ಮತ್ತು ಮನಸ್ಸನ್ನು ಆರೋಗ್ಯವಾಗಿಟ್ಟುಕೊಳ್ಳಿ ಎಂದು ಸಲಹೆ ನೀಡಿದರು.


ಕ್ರೀಡೆಗಳಲ್ಲಿ ಎಲ್ಲ ಪೊಲೀಸರರು ಸ್ಪೂರ್ತಿಯಿಂದ ಭಾಗವಹಿಸಿ. ಹಿರಿಯವರು ಕಿರಿಯರು ಎಂಬ ಭೇದಭಾವವಿಲ್ಲದೇ ಎಲ್ಲರೂ ತಮಗಿಷ್ಟವಾದ ಕ್ರೀಡೆಕೂಟದಲ್ಲಿ ಭಾಗಿಯಾಗಿ. ಕಿರಿಯರಿಗೆ ತಮ್ಮ ಸಾಮಥ್ರ್ಯ ತೋರಿಸಲು ಇದೊಂದು ಉತ್ತಮ ಅವಕಾಶವಾದರೆ, ಹಿರಿಯರಿಗೆ ತಮ್ಮಲ್ಲಿನ್ನೂ ಕ್ರೀಡೆಗಳಲ್ಲಿ ಭಾಗಿಯಾಗುವ ಕಸವು ಉಳಿದಿದೆ ಎಂದು ತೋರಿಸಲು ಉತ್ತಮ ವೇದಿಕೆಯಾಗಿದೆ. ಇದನ್ನು ಎಲ್ಲರೂ ಸದ್ಭಳಕೆ ಮಾಡಿಕೊಳ್ಳಿ. ಈ ಕ್ರೀಡಾಕೂಟದ ಮುಖಾಂತರ ನಿಮ್ಮ ಬಾಂಧವ್ಯ ಮತ್ತಷ್ಟು ಉತ್ತಮಗೊಳ್ಳಲಿ ಎಂದು ಶುಭಹಾರೈಸಿದರು.


ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಆಯೋಜಿಸಿದ್ದ ಕ್ರೀಡಾಕೂಟದಲ್ಲಿ ಜಿಲ್ಲೆಯ ಪೊಲೀಸರು ಭಾಗವಹಿಸಿದ್ದರು. ರಾಮನಗರ, ಚನ್ನಪಟ್ಟಣ, ಮಾಗಡಿ ಉಪವಿಭಾಗಗಳ ಪೊಲೀಸ್ ತಂಡಗಳು, ಕನಕಪುರ ವೃತ ತಂಡ, ಡಿಎಆರ್ ಮತ್ತು ಡಿಪಿಎ ತಂಡ ಹಾಗೂ ಮಹಿಳಾ ಪೊಲೀಸ್ ತಂಡ ಭಾಗವಿಸಿದ್ದವು.


ಕ್ರೀಡಾಕೂಟದಲ್ಲಿ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ರಾಜೇಂದ್ರನ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಬಾಬು ಶಾರ್ಟ್‍ಪುಟ್ ಎಸೆತವನ್ನು ಎಸೆಯುವ ಮೂಲಕ ಎಲ್ಲರ ಗಮನ ಸೆಳೆದರು.


ಕಾರ್ಯಕ್ರಮದಲ್ಲಿ ಚನ್ನಪಟ್ಟಣ ಡಿವೈಎಸ್‍ಪಿ ಓಂಪ್ರಕಾಶ್, ವೃತ ನಿರೀಕ್ಷರಾದ ಶಿವಕುಮಾರ್, ದಿವಾಕರ್ ಮುಂತಾದವರು ಭಾಗವಹಿಸಿದ್ದರು.


 ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑