Tel: 7676775624 | Mail: info@yellowandred.in

Language: EN KAN

    Follow us :


ಸರ್ಕಾರದ ಸೌಲಭ್ಯಗಳು ಜನರಿಗೆ ವರದಾನವಾಗಲಿ: ದಿಗ್ವಿಜಯ್ ಬೋಡ್ಕೆ

Posted date: 23 Nov, 2022

Powered by:     Yellow and Red

ಸರ್ಕಾರದ ಸೌಲಭ್ಯಗಳು ಜನರಿಗೆ ವರದಾನವಾಗಲಿ: ದಿಗ್ವಿಜಯ್ ಬೋಡ್ಕೆ

ರಾಮನಗರ, ನ.23:  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸಿಗುವ ಸವಲತ್ತುಗಳು ಮತ್ತು ಸ್ವಚ್ಛ ಭಾರತ್ ಮಿಷನ್ ಸೇರಿ ವಿವಿಧ ಸರ್ಕಾರದ ಸೌಲಭ್ಯಗಳು ಜನರಿಗೆ ವರದಾನವಾಗುವ ರೀತಿಯಲ್ಲಿ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಂಡು ಕಾರ್ಯಗತಗೊಳಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಮನಗರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನರೇಗಾ, ಸ್ವಚ್ಛ ಭಾರತ ಮಿಷನ್, ವಸತಿ ಯೋಜನೆ, ಸೇರಿ ವಿವಿಧ ಯೋಜನೆಯ ಪ್ರಗತಿ ಪರೀಶೀಲನಾ ಸಭೆ ನಡೆಸಿ ಮಾತನಾಡಿದರು.


ಗ್ರಾಮೀಣ ಭಾಗದ ಜನರ ಏಳಿಗೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದೆ. ಇಂತಹ ಯೋಜನೆಗಳು ಜನರ ಜೀವನಕ್ಕೆ ವರದಾನವಾಗಬೇಕು. ಆ ನಿಟ್ಟಿನಲ್ಲಿ ಜನರ ಮನೆಮನೆಗೂ ಯೋಜನೆ ತಲುಪುವಂತೆ ಮಾಡಿ ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.


ನರೇಗಾ ಯೋಜನೆಯಲ್ಲಿ ಮಾನವ ದಿನಗಳ ಸೃಜನೆ, 2022-23ನೇ ಸಾಲಿನ ವೈಯಕ್ತಿಕ ಕಾಮಗಾರಿಗಳ ಪ್ರಗತಿ, ಅಮೃತ್ ಸರೋವರ ಯೋಜನೆಯ ಪ್ರಗತಿ, ಸಾಮಾಜಿಕ ಲೆಕ್ಕ ಪರಿಶೋಧನೆ, ಎಸ್.ಕ್ಯೂ.ಎಂ. ಮತ್ತು ಡಿ.ಕ್ಯೂ.ಎಂ ವಸೂಲಾತಿ, ಸ್ವಸಹಾಯ ಸಂಘದ ಮಹಿಳೆಯರಿಂದ ನರ್ಸರಿ ಅಭಿವೃದ್ಧಿಯ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಬಳಿ ಮಾಹಿತಿ ಪಡೆದು, ಈ ಸಂಬಂಧ ಜಿಲ್ಲೆಯಲ್ಲಿ ಶೀಘ್ರ ಪ್ರಗತಿ ಕಾಣಬೇಕು ಎಂದು ತಿಳಿಸಿದರು.


ಸ್ವಚ್ಛ ಭಾರತ್ ಮಿಷನ್ ಯೋಜನೆಯಲ್ಲಿ ಸಮುದಾಯ ಮತ್ತು ವೈಯಕ್ತಿಕ ಶೌಚಾಲಯ ಜನರ ಉಪಯೋಗಕ್ಕೆ ಬರಬೇಕು. ದ್ರವ ಮತ್ತು ಘನತ್ಯಾಜ್ಯ ನಿರ್ವಹಣಾ ಘಟಕಗಳು ಪಂಚಾಯಿತಿ ಮಟ್ಟದಲ್ಲಿ ಪ್ರಗತಿ ಸಾಧಿಸಬೇಕು. ಜೊತೆಗೆ 14-15ನೇ ಹಣಕಾಸು ಯೋಜನೆಯಡಿ ಬಾಕಿ ಉಳಿದಿರುವ ಅನುದಾನದ ಕಡೆ ಗಮನವಹಿಸಿ ಎಂದು ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು.


ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ರಮೇಶ್ ಟಿ.ಕೆ ಮಾತನಾಡಿ, ನರೇಗಾ ಯೋಜನೆಯಲ್ಲಿ ಮಾನವ ದಿನಗಳ ಸೃಜನೆ ಬಹಳ ಮುಖ್ಯ, ಜೊತೆಗೆ ವೈಯಕ್ತಿಕ ಕಾಮಗಾರಿಗಳು ಜನರ ಮನೆ ಬಾಗಿಲಿಗೆ ತಲುಪಬೇಕು. ಈಗಾಗಲೇ ಜಿಲ್ಲೆಯಲ್ಲಿ ಅಮೃತ್ ಸರೋವರ ಯೋಜನೆ ಪ್ರಗತಿಯಲ್ಲಿದೆ. 75 ಕೆರೆಗಳ ಪೈಕಿ 20 ಕ್ಕೂ ಹೆಚ್ಚು ಕೆರೆಗಳ ಕಾಮಗಾರಿ ಮುಗಿದಿದೆ. ಉಳಿದ ಕೆರೆಗಳ ಕಾಮಗಾರಿ ಮುಂದುವರೆದಿದೆ ಶೀಘ್ರದಲ್ಲೇ ಕೆಲಸ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ಯೋಜನಾ ನಿರ್ದೇಶಕರಾದ ಕೆ. ಸುಬ್ಬಯ್ಯ, ಸಹಾಯಕ ಕಾರ್ಯದರ್ಶಿಗಳು, ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು, ಜಂಟಿ ಕೃಷಿ ನಿರ್ದೇಶಕರು, ಉಪ ನಿರ್ದೇಶಕರು, ತೋಟಗಾರಿಕೆ, ರೇಷ್ಮೆ, ಅರಣ್ಯ ಇಲಾಖೆಯ ಅಧಿಕಾರಿಗಳು, ಮಾಗಡಿ, ಚನ್ನಪಟ್ಟಣ, ಕನಕಪುರ ಹಾಗೂ ರಾಮನಗರ ತಾಲ್ಲೂಕಿನ ಸಹಾಯಕ ನಿರ್ದೇಶಕರು (ಗ್ರಾಉ), ಜಿಲ್ಲೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಮಟ್ಟದ ತಾಂತ್ರಿಕ ಸಂಯೋಜಕರು ಮತ್ತು ತಾಂತ್ರಿಕ ಸಹಾಯಕ ಅಭಿಯಂತರರು, ತಾಲ್ಲೂಕು ಐಇಸಿ ಸಂಯೋಜಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಸೇರಿ ಜಿಲ್ಲಾ ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑