Tel: 7676775624 | Mail: info@yellowandred.in

Language: EN KAN

    Follow us :


ವದಂತಿಗಳಿಗೆ ಕಿವಿಗೊಡದೇ ಪೋಲಿಯೋ ಹನಿ ಹಾಕಿಸಿ: ಡಾ. ಬಿ.ಆರ್. ಮಮತಾ

Posted date: 29 Jan, 2018

Powered by:     Yellow and Red

ವದಂತಿಗಳಿಗೆ ಕಿವಿಗೊಡದೇ ಪೋಲಿಯೋ ಹನಿ ಹಾಕಿಸಿ: ಡಾ. ಬಿ.ಆರ್. ಮಮತಾ

ರಾಮನಗರ : ವದಂತಿಗಳಿಗೆ ಕಿವಿಗೊಡದೇ ಮಾರಕ ರೋಗ ಪೋಲಿಯೋ ನಿರ್ಮೂಲನೆಯ ಲಸಿಕೆಯನ್ನು ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಹಾಕಿಸುವಂತೆ  ಜಿಲ್ಲಾಧಿಕಾರಿ ಡಾ. ಬಿ.ಆರ್. ಮಮತಾ ಅವರು ಕರೆ ನೀಡಿದರು.
ಅವರು ನಗರದ ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೋಟರಿ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಜ.28ರ ಭಾನುವಾರ ಹಮ್ಮಿಕೊಳ್ಳಲಾಗಿದ್ದ ರಾಷ್ಟೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೋ ಹನಿ ನೀಡಿ ಮಾತನಾಡಿದರು. 
ಪೋಲಿಯೋ ನಿರ್ಮೂಲನೆಯಲ್ಲಿ ದೇಶ ಗಣನೀಯ ಪ್ರಗತಿ ಸಾಧಿಸಿದೆ, ಆದರೂ ನೆರೆಯ ರಾಷ್ಟ್ರಗಳಲ್ಲಿ ವರದಿಯಾಗುತ್ತಿದೆ. ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 86,245 ಮಕ್ಕಳಿದ್ದು, ಯಾವುದೊಂದು ಮಗುವನ್ನು ಬಿಡದೇ ಎಲ್ಲಾ ಮಕ್ಕಳಿಗೂ ಪೋಲಿಯೋ ಹನಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಅವರು ಕಟ್ಟುನಿಟ್ಟಾಗಿ ತಿಳಿಸಿದರು.
86,245 ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು ಒಟ್ಟು 542 ಲಸಿಕಾ ಕೇಂದ್ರಗಳನ್ನು ರಚಿಸಲಾಗಿದ್ದು, ಬಸ್ - ರೈಲು ನಿಲ್ದಾಣಗಳು, ಇನ್ನಿತರ ಜನ ನಿಬಿಡ ಸ್ಥಳಗಳಲ್ಲಿ ಒಟ್ಟು 27 ಟ್ರಾನ್ಸಿಟ್ ಕೇಂದ್ರಗಳನ್ನು ತೆರೆಯಲಾಗಿದೆ. ಗುಡ್ಡಗಾಡು ಪ್ರದೇಶಗಳಲ್ಲಿ ಹೊಸ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳು, ಕಾಮಗಾರಿಗಳು, ವಲಸೆ ಸಮುದಾಯವಿರುವ ಪ್ರದೇಶಗಳಲ್ಲಿ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಲು 15 ಮೊಬೈಲು (ಸಂಚಾರಿ) ತಂಡವನ್ನು ರಚಿಸಲಾಗಿದೆ. ಲಸಿಕಾ ಕೇಂದ್ರಗಳ ಮೇಲುಸ್ತುವಾರಿಗೆ 121 ಮೇಲ್ವಿಚಾರಕರನ್ನು ನಿಯೋಜಿಸಲಾಗಿದ್ದು, ಇವರೆಲ್ಲರೂ ಶ್ರಮವಹಿಸಿ ಜಿಲ್ಲೆಯ ಎಲ್ಲಾ ಅರ್ಹ ಮಕ್ಕಳಿಗೆ ಪೋಲಿಯೋ ಹನಿ ಹಾಕುವಂತೆ ಅವರು ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದ ಮೊದಲ ಸುತ್ತನ್ನು ಜನವರಿ 28 ಹಾಗೂ ಎರಡನೇ ಸುತ್ತನ್ನು ಮಾರ್ಚ್ 11 ರಂದು ಹಮ್ಮಿಕೊಳ್ಳಲಾಗಿದೆ, ಈ ಅಭಿಯಾನದಲ್ಲಿ ಎಲ್ಲಾ ಅರ್ಹ ಮಕ್ಕಳಿಗೆ ಪೋಲಿಯೋ ಹನಿಯನ್ನು ಕಡ್ಡಾಯವಾಗಿ ಹಾಕುವಂತೆ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷರಾದ ಪಿ. ರವಿಕÀುಮಾರ್ ಮಾತನಾಡಿ, ಜಿಲ್ಲೆಯಲ್ಲಿರುವ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಹನಿಯನ್ನು ಕಡ್ಡಾಯವಾಗಿ ನೀಡಬೇಕು, ಮನೆ-ಮನೆಗೆ ತೆರಳಿ ಪೋಲಿಯೋ ಹನಿ ಹಾಕಬೇಕು ಅಲ್ಲದೇ ಸಾರ್ವಜನಿಕರು ತಮ್ಮ ಪರಿಸರದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಿ ಮಕ್ಕಳ ಆರೋಗ್ಯ ಕಾಪಾಡಬೇಕು ಎಂದು ಹೇಳಿದರು. 
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಮರನಾಥ್, ಪೋಲಿಯೋ ನೋಡಲ್ ಅಧಿಕಾರಿ ವೀಣಾ, ಆರ್.ಸಿ.ಎಚ್. ಅಧಿಕಾರಿ ಲಕ್ಷ್ಮೀಪತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರೇವಣೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವರಾಜ್ ಸೇರಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು, ರೋಟರಿ ಸಂಸ್ಥೆಯ ಪದಾಧಿಕಾರಿಗಳು ಮಕ್ಕಳು ಹಾಗೂ ತಾಯಂದಿರು ಉಪಸ್ಥಿತರಿದ್ದರು.

 

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑