Tel: 7676775624 | Mail: info@yellowandred.in

Language: EN KAN

    Follow us :


ಮಕ್ಕಳು ಸೃಜನಶೀಲರಾಗಿ ಬೆಳೆಯಬೇಕು ಹರೀಶ್ ಹೆಗ್ಗಡೆ

Posted date: 07 Jun, 2019

Powered by:     Yellow and Red

ಮಕ್ಕಳು ಸೃಜನಶೀಲರಾಗಿ ಬೆಳೆಯಬೇಕು ಹರೀಶ್ ಹೆಗ್ಗಡೆ

ಚನ್ನಪಟ್ಟಣ: ಸರ್ಕಾರಿ ಶಾಲಾ ಮಕ್ಕಳು ಎಂದರೆ ಮೂಗು ಮುರಿಯುವ ಈ ಸಂದರ್ಭದಲ್ಲಿ ಸರ್ಕಾರಿ ಶಾಲೆಯಲ್ಲಿ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ಸಂತಸದ ಸಂಗತಿ, ಇಂತಹ ಮಕ್ಕಳಿಗೆ ಸಹಾಯ ಹಸ್ತ ನೀಡಲು ತುಂಬಾ ಖುಸಿಯಾಗುತ್ತದೆ ಎಂದು ಶೆಟ್ಟಿಹಳ್ಳಿ ಗ್ರಾಮದಲ್ಲಿ ವೃದ್ದಾಶ್ರಮ ನಡೆಸುತ್ತಿರುವ ಮಾತೃಶ್ರೀ ಸೇವಾ ಟ್ರಸ್ಟ್ ನ ಸಂಸ್ಥಾಪಕ ಕಾರ್ಯದರ್ಶಿ ಹರೀಶ್ ಹೆಗ್ಗಡೆ ತಿಳಿಸಿದರು, ಅವರು ಮತ್ತೀಕೆರೆ ಶೆಟ್ಟಿಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತಮ್ಮ ಟ್ರಸ್ಟ್ ವತಿಯಿಂದ ಮಕ್ಕಳಿಗೆ ಉಚಿತ ನೋಟ್ ಬುಕ್ ಮತ್ತು ಲೇಖನ ಸಾಮಾಗ್ರಿಗಳನ್ನು ವಿತರಿಸಿ ಮಾತನಾಡಿದರು.


ಅಧ್ಯಕ್ಷತೆ ವಹಿಸಿ ಮಾತನಾಡಿದ ಜಾನಪದ ಪರಿಷತ್ತು ತಾಲ್ಲೂಕು ಅಧ್ಯಕ್ಷ ಗೋ ರಾ ಶ್ರೀನಿವಾಸ ರವರು ಮಕ್ಕಳ ಕಲಿಕೆ ಪ್ರಾರಂಭವಾಗುವುದೇ ಪ್ರಾಥಮಿಕ ಶಾಲೆಯಲ್ಲಿ, ಮಕ್ಕಳು ಇಲ್ಲಿ ಏನು ಕಲಿಯುತ್ತಾರೋ ಅದು ಉನ್ನತ ಶಿಕ್ಷಣದಲ್ಲಿಯೂ ಮುಂದುವರಿಯುತ್ತದೆ, ಪ್ರಾಥಮಿಕ ಶಾಲೆಯ ಶಿಕ್ಷಕರೇ ಭವಿಷ್ಯದ ಪ್ರಜೆಗಳ ಶಾಶ್ವತ ಕಂಬಗಳು, ಶಿಕ್ಷಕರು ಮತ್ತು ಪೋಷಕರು ಇಬ್ಬರೂ ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಇದೆಯೋ ಅದನ್ನೇ ಕಲಿಸಿಕೊಟ್ಟರೇ ಭವಿಷ್ಯದಲ್ಲಿ ಮಕ್ಕಳು ಉತ್ತಮ ಹೆಸರು ಗಳಿಸಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.


ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜೀವರಕ್ಷಾ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಆಶಾ ರವರು ನಿಮ್ಮ ತಂದೆತಾಯಿಗಳು ನಿಮ್ಮನ್ನು ಎಷ್ಟು ಪ್ರೀತಿಯಿಂದ ನೋಡಿಕೊಳ್ಳುತ್ತಾರೋ ಅಷ್ಟೇ ಪ್ರೀತಿಯಿಂದ ತಮ್ಮ ತಂದೆತಾಯಂದಿರನ್ನು ನೋಡಿಕೊಂಡರೆ ಅನಾಥ ಶ್ರಮ ಮತ್ತು ವೃದ್ದಾಶ್ರಮಗಳ ಅವಶ್ಯಕತೆ ಇಲ್ಲ, ಸಮಾಜ ನಮಗೇನು ಕೊಟ್ಟಿದೆ ಎನ್ನುವುದಕ್ಕಿಂತ ಸಮಾಜಕ್ಕೆ ನಮ್ಮ ಕೊಡುಗೆ ಏನು ಎಂದು ನಮಗೆ ನಾವೇ ಪ್ರಶ್ನೆ ಮಾಡಿಕೊಂಡರೆ ಉತ್ತಮ ಜೀವನ ನಡೆಸಬಹುದು ಎಂದರು.


ಮುಖ್ಯ ಶಿಕ್ಷಕ ಕರಿಯಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು, ಮಾತೃಶ್ರೀ ಸೇವಾ ಟ್ರಸ್ಟ್ ನ ಅಧ್ಯಕ್ಷ ನಾಗೇಶ್ ಸ್ವಾಗತಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ಸಂತೋಷ, ಕೃಷ್ಣಪ್ಪ, ಮನೋಜ್ ಮತ್ತು ಶಾಲಾ ಶಿಕ್ಷಕರು ಹಾಜರಿದ್ದರು, ಪ್ರಾಥಮಿಕ ಶಾಲೆಯ ಎಲ್ಲಾ ಮಕ್ಕಳಿಗೂ ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑