Tel: 7676775624 | Mail: info@yellowandred.in

Language: EN KAN

    Follow us :


ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಪಡೆದುಕೊಳ್ಳಲು ರೈತರಿಗೆ ಕೃಷಿ ಅಧಿಕಾರಿ ಕರೆ

Posted date: 21 Jun, 2019

Powered by:     Yellow and Red

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಪಡೆದುಕೊಳ್ಳಲು ರೈತರಿಗೆ ಕೃಷಿ ಅಧಿಕಾರಿ ಕರೆ

ಚನ್ನಪಟ್ಟಣ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ,(PM- KISAN) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ 6,000 ರೂಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆಯಂತೆ ಒಟ್ಟು ಮೂರು ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತದೆ.

ರೈತರು ತಮ್ಮ ಆಧಾರ್ ಪ್ರತಿ, ಪಹಣಿ ವಿವರಗಳು ಹಾಗೂ ಬ್ಯಾಂಕ್ ಖಾತೆ ವಿವರಗಳ ಪ್ರತಿಗಳೊಂದಿಗೆ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಯ ಬಾಪೂಜಿ ಸೇವಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರ, ತೋಟಗಾರಿಕೆ ಇಲಾಖೆ,  ರೇಷ್ಮೆ ಇಲಾಖೆ ಅಥವಾ ಜನಸ್ನೇಹಿ ಕೇಂದ್ರಗಳಲ್ಲಿ ಸ್ವಯಂ ಘೋಷಣಾ ಪತ್ರದೊಂದಿಗೆ ದಿನಾಂಕ 25.06.2019 ರೊಳಗೆ ನೋಂದಾಯಿಸಿಕೊಳ್ಳಬಹುದು (ಈಗಾಗಲೇ ಅರ್ಜಿ ಸಲ್ಲಿಸಿರುವವರನ್ನು ಹೊರತುಪಡಿಸಿ). ಎಂದು ರಾಮನಗರ ಕೃಷಿ ಸಹಾಯಕ ನಿರ್ದೇಶಕ ನಾಗರಾಜು ತಿಳಿಸಿದರು.


ಅವರು ಚನ್ನಪಟ್ಟಣ ದ ಪ್ರಭಾರ ತಹಶಿಲ್ದಾರ್ ಮಹದೇವಯ್ಯ ನವರ ಅಧ್ಯಕ್ಷತೆಯಲ್ಲಿ ಸಂಬಂಧ ಪಟ್ಟ ಅಧಿಕಾರಿಗಳ ಸಮಕ್ಷಮದಲ್ಲಿ ಪತ್ರಿಕಾ ಹೇಳಿಕೆ ನೀಡದರು. 


1.ನಿವೃತ್ತ /ಹಾಲಿ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ ನೌಕರರು (ಗ್ರೂಪ್ ಡಿ ಹೊರತುಪಡಿಸಿ)

2. 10 ಸಾವಿರ ರೂ ಗಿಂತ ಹೆಚ್ಚಿನ ಮೊತ್ತ ಪಡೆಯುತ್ತಿರುವ ಪಿಂಚಣಿದಾರರು

3. ಆದಾಯ ತೆರಿಗೆ ಪಾವತಿದಾರರ ಕುಟುಂಬದವರು

4. ವೃತ್ತಿಪರರು ಪತಿ/ಪತ್ನಿ ( ವೈದ್ಯರು, ಅಭಿಯಂತರರು, ವಕೀಲರು ಮತ್ತು ಇತರೆ)

5. ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆ ಹೊಂದಿದ ಕುಟುಂಬದವರು

6. ಸಾಂಸ್ಥಿಕ ಭೂಮಾಲಿಕರ ಕುಟುಂಬದವರು ಈ ಸೌಲಭ್ಯಗಳಿಗ  ಅರ್ಹರಾಗಿರುವುದಿಲ್ಲ ಎಂದು ತಿಳಿಸಿದರು.


*ವಿಶೇಷ ಸೂಚನೆ*: ನಾಲ್ಕನೇ ಶನಿವಾರ ಮತ್ತು ಭಾನುವಾರವೂ ಎಲ್ಲಾ ಹೋಬಳಿಯ ರೈತ ಸಂಪರ್ಕ ಕೇಂದ್ರಗಳು ಮತ್ತು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳು ತೆರೆದಿರುತ್ತವೆ. ರೈತರು ಸದುಪಯೋಗ ಪಡೆದುಕೊಳ್ಳಬೇಕೆಂದು ಪ್ರಭಾರ ತಹಶಿಲ್ದಾರ್ ಮಹದೇವಯ್ಯ ರೈತರಿಗೆ ಮನವಿ ಮಾಡಿದ್ದಾರೆ.


ಗೋ ರಾ ಶ್ರೀನಿವಾಸ...

ಮೊ:9845856139.

ಪ್ರತಿಕ್ರಿಯೆಗಳು

  • ನಿಮ್ಮ ಅಭಿಪ್ರಾಯ ತಿಳಿಸುವಲ್ಲಿ ನೀವು ಮೊದಲಿಗರಾಗಿ.

ನಿಮ್ಮ ಅಭಿಪ್ರಾಯಗಳನ್ನು ಬರೆಯಿರಿ/ತಿಳಿಸಿ.

Top Stories »  


Top ↑